ಸಾಂಸ್ಕøತಿಕ ಕ್ಷೇತ್ರಗಳಿಗೆ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರ:ನಟ ಶ್ರೀನಾಥ

ಕಲಬುರಗಿ:ಜೂ.5: ಶಿಕ್ಷಣ, ಉದ್ಯೋಗ, ಕೃಷಿ, ಉದ್ಯಮ, ಸಾಹಿತ್ಯ, ಕಲೆ, ಸಾಂಸ್ಕøತಿಕ ಕ್ಷೇತ್ರಗಳಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ ಎಂದು ಕನ್ನಡ ಚಲನಚಿತ್ರ ನಟ-ಪ್ರಣಯರಾಜ್ ಶ್ರೀನಾಥ ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನಸ ಸುವರ್ಣ ಸಭಾ ಭವನದಲ್ಲಿ ರವಿವಾರ ಆಯೋಜಿಸಿದ ಕಸಾಪ ಸಂಸ್ಥಾಪಕರಲ್ಲೊಬ್ಬರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟು ಹಾಕಿ ನಾಡಿನ ಇಡೀ ಕನ್ನಡಿಗರನ್ನು ಒಂದುಗೂಡಿಸುವ ಮತ್ತು ಒಗ್ಗೂಡಿಸುವ ಕಾರ್ಯ ಮಾಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಸಾರಥ್ಯದಲ್ಲಿ ಕಲಬುರಗಿ ಜಿಲ್ಲೆಯಲ್ಲೂ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ನೇತೃತ್ವದ ಬಳಗ ಜನಪರ-ಜೀವಪರ ಕಾರ್ಯಗಳನ್ನು ಮಾಡುವ ಮೂಲಕ ಪರಿಷತ್ತನ್ನು ಜನಸಾಮಾನ್ಯರತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸಾಮಾಜಿಕ ಕಾನೂನುಗಳ ಹರಿಕಾರರಾಗಿ ಕಲೆ, ಸಾಹಿತ್ಯ, ಸಂಸ್ಕøತಿಗೆ ಅವರು ನೀಡಿದ್ದ ಕೊಡುಗೆ ಅಪಾರ. ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೀಸಲಾತಿ ಪರಿಕಲ್ಪನೆ, ವಿಶೇಷವಾಗಿ ಮಹಿಳೆಯರಿಗೆ ನೀಡುತ್ತಿದ್ದ ಸ್ಥಾನಮಾನಗಳು ಇಡೀ ದೇಶದ ಗಮನ ಸೆಳೆದಿದ್ದವು. ಕನ್ನಡದ ಬೆಳವಣಿಗೆಯಲ್ಲಿ ಇವರ ಕೊಡುಗೆ ಅಪಾರವಾಗಿದೆ ಎಂದ ಅವರು, ಜಿಲ್ಲಾ ಕಸಾಪವು ಸಹ ನಿತ್ಯ ನೂತನ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಪರಿಷತ್ತಿನ ಘನತೆಯನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದರು.
ಕಾಳಗಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಶರಣಪ್ಪ ಮೋತಕಪಳ್ಳಿ ಮಾತನಾಡಿ, ಆಧುನಿಕ ಇತಿಹಾಸದಲ್ಲಿ ಅಮರವಾಗಿ ಉಳಿಯುವಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೊದಲ ಬಾರಿಗೆ ಭಾರತದಲ್ಲಿ ಕೊಡುಗೆಯಾಗಿ ನೀಡಿದರು. ಜತೆಗೆ ತಮ್ಮ ಪ್ರಜೆಗಳ ನೆಮ್ಮದಿ ಬದುಕಿಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟರು ಎಂದು ಮಾರ್ಮಿಕವಾಗಿ ಹೇಳಿದರು.
ಪಶುಸಂಗೋಪನಾ ಇಲಾಖೆಯ ನೌಕರರ ಸಂಘದ ಜಿಲ್ಲಾಧ್ಯಕ್ಷ ನಿಜಲಿಂಗಪ್ಪ ಕೊರಳ್ಳಿ, ಸಂಶೋಧಕ ಮುಡುಬಿ ಗುಂಡೇರಾವ, ಸತ್ಯಂ ಪಿಯು ಕಾಲೇಜಿನ ಉಪನ್ಯಾಸಕ ಪ್ರೊ. ಅಮರೇಶ ಹಾಲ್ವಿ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಮಾತನಾಡಿದರು.
ಪ್ರಮುಖರಾದ ಕಲ್ಯಾಣಕುಮಾರ ಶೀಲವಂತ, ಶಿಲ್ಪಾ ಜೋಶಿ, ರಾಜೇಂದ್ರ ಮಾಡಬೂಳ, ಧರ್ಮಣ್ಣಾ ಹೆಚ್.ಧನ್ನಿ, ಸೋಮಶೇಖರಯ್ಯಾ ಹೊಸಮಠ, ಶಿವಾನಂದ ಪೂಜಾರಿ, ಶಿವಶರಣ ಹಡಪದ, ವಿಶ್ವನಾಥ ತೊಟ್ನಳ್ಳಿ, ಪ್ರಭುಲಿಂಗ ಮೂಲಗೆ, ಡಾ. ರೆಹಮಾನ್ ಪಟೇಲ್, ರೇವಣಸಿದ್ಧ ಹೊಟ್ಟಿ, ರೇವಣಸಿದ್ದಪ್ಪ ಜೀವಣಗಿ, ನಾಗಪ್ಪ ಎಂ.ಸಜ್ಜನ್, ಗಣೇಶ ಚಿನ್ನಾಕಾರ, ಮಲ್ಲಿನಾಥ ಸಂಗಶೆಟ್ಟಿ, ಪ್ರಭವ ಪಟ್ಟಣಕರ್, ಗೀತಾ ಶ್ರೀನಾಥ, ಬಸ್ವಂತರಾಯ ಕೋಳಕೂರ, ಎಸ್.ಕೆ.ಬಿರಾದಾರ, ಶಾಂತಕುಮಾರ ಪಾಟೀಲ ಕೋಳಕೂರ, ಈರಣ್ಣಾ ಮದಗುಣಕಿ, ಸಂತೋಷ ಶಖಾಪೂರೆ, ಸಿದ್ಧಾರಾಮ ಹಂಚನಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.