ಸಾಂಸ್ಕøತಿಕ ಚಟುವಟಿಕೆ ಶಿಕ್ಷಣದ ಒಂದು ಅವಿಭಾಜ್ಯ ಅಂಗ

ಬೀದರ್:ಜ.22: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಚಟುವಟಿಕೆ ಶಿಕ್ಷಣದ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಂಜುಕುಮಾರ ಕಾಂಗೆ ಹೇಳಿದರು.
ಅವರು ಹುಮನಾಬಾದ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಕರ್ನಾಟಕ ನವೀನ ಶಿಕ್ಷಣ ಸಂಸ್ಥೆ ಚಾಂಬೋಳ ಇವರ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗಣರಾಜ್ಯೋತ್ಸವದ ಈ ಶುಭ ಗಳಿಗೆಯಲ್ಲಿ ವಿದ್ಯಾರ್ಥಿಗಳಿಗಾಗಿ ದೇಶ ಭಕ್ತಿ ಗಈತೆ ಮತ್ತು ಭಾಷಣ ಸ್ಪರ್ಧೆ ಏರ್ಪಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಬೀದರ ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕಾ ಅಧ್ಯಕ್ಷ ಎಸ್.ಬಿ. ಕುಚಬಾಳ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ದೇಶಭಕ್ತಿಯ ಅರಿವು ಹಾಗೂ ರಾಗ ಬದ್ಧವಾಗಿ ಹಾಡುವುದನ್ನು ಕಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಈ ಒಂದು ಸಾಂಸ್ಕøತಿಕ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ದೇಶ ಭಕ್ತಿಗೀತೆ ಸ್ಪರ್ಧೆಗಳಲ್ಲಿ ವಿಜೇತರಾದ ಕು. ಭವಾನಿ, ಜೈಶೀಲಾ, ಸನಾ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ ಕು. ಕೃಷ್ಣಾ, ಮಮಿತಾ, ಪ್ರೀತಿ ಇವರಿಗೆ ಪ್ರಮಾಣ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂತು ದೇವೆಂದ್ರ, ಹುಗ್ಗೆ, ಪರಮೇಶ್ವರ, ಶಿಕ್ಷಕರ ಸಂಘದ ಅಧ್ಯಕ್ಷ ಮಹೆಬೂಬ ಪಟೇಲ್ ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿರಂತರೆಡ್ಡಿ ಜಂಪಾ ಇವರು ಕಾರ್ಯಕ್ರಮ ನಿರ್ವಹಿಸಿದರು, ಶರಣಪ್ಪ ಗಂಗೆನವರ್ ಇವರ ವಂದನಾರ್ಪಣೆ ಮಾಡಿದರು.