ಸಾಂಸ್ಕøತಿಕ ನಾಯಕ: ಬಸವಣ್ಣನವರಿಗೆ ಗೌರವ

ಬೀದರ್:ಜ.20: ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಘೋಷಿಸಿ ರಾಜ್ಯ ಸರ್ಕಾರವು ಬಸವಣ್ಣನವರನ್ನು ಗೌರವಿಸಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಪ್ರತಿಕ್ರಿಯಿಸಿದ್ದಾರೆ.
ಬಸವಣ್ಣನವರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ್ದರು. ಬಸವಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪಿಸಿ ವಿಶ್ವಕ್ಕೆ ಮೊದಲ ಬಾರಿಗೆ ಸಂಸತ್ತಿನ ಪರಿಕಲ್ಪನೆಯ ಪರಿಚಯ ಮಾಡಿದ್ದರು. ಕಲ್ಯಾಣ ರಾಜ್ಯ ಕಟ್ಟಿದ್ದರು ಎಂದು ಹೇಳಿದ್ದಾರೆ.
ಬಸವಣ್ಣನವರನ್ನು ಸಾಂಸ್ಕøತಿಕ ನಾಯಕರೆಂದು ಘೋಷಿಸುವ ಬಹು ದಿನಗಳ ಬೇಡಿಕೆ ಕುರಿತು ಅರಣ್ಯ, ಪರಿಸರ, ಜೈವಿಕ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿದ್ದರು ಎಂದು ತಿಳಿಸಿದ್ದಾರೆ.
ಬಸವಣ್ಣನವರನ್ನು ಸಾಂಸ್ಕøತಿಕ ನಾಯಕರೆಂದು ಘೋಷಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.