ಸಾಂಸ್ಕøತಿಕ ಸಂಜೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ವಿಜಯಪುರ ನ.7: ನಗರದ ಆನಂದ್ ಮಹಲ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶನಿವಾರ ಆಯೋಜಿಸಲಾದ ‘ಸಾಂಸ್ಕೃತಿಕ ಸಂಜೆ’ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿದ್ದು, ಕಾರ್ಯಕ್ರಮದಲ್ಲಿ ನೆರೆದ ಜನರನ್ನು ಸಾಂಸ್ಕøತಿಕ ಲೋಕಕ್ಕೆ ಕರೆದೊಯ್ದಂತೆ ಭಾಸವಾಯಿತು.

ಕೋವಿಡ್-19ರ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಈ ಕಾರ್ಯಕ್ರಮ ನಡೆದಿರಲಿಲ್ಲ. ಮತ್ತೇ ಸ್ಥಳೀಯ ಕಲಾವಿದರಿಗೆ ಈ ವೇದಿಕೆ ಮೂಲಕ ತಮ್ಮ ಪ್ರತಿಭೆ ಅನಾವರಣಗೊಳಿಸಲು ಅವಕಾಶ ಕಲ್ಪಿಸಿದಂತಾಗಿದೆ. ಕಲಾಭಿಮಾನಿಗಳು ಹಾಗೂ ಕಲಾರಸಿಕರು ಭಾಗವಹಿಸಿ ತಮ್ಮ ನೆಚ್ಚಿನ ಕಲೆಗಳನ್ನು ನೋಡಿ, ಆನಂದಿಸಬಹುದಾಗಿದೆ.

ಈ ಸಾಂಸ್ಕøತಿಕ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಪ್ರತಿ ತಿಂಗಳ ಮೊದಲನೇ ಶನಿವಾರದಂದು ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವು ಮುಂಬರುವ ದಿನಗಳಲ್ಲಿ ನಿರಂತರವಾಗಿ ನಡೆಯಲಿದೆ. ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸ್ಥಳೀಯ ಕಲಾವಿದರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ ಹಾಗೂ ಜನರಿಗೂ ಸಹ ಇಂದಿನ ಒತ್ತಡದ ಜೀವನ ಮಧ್ಯೆ ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳು ಅವಶ್ಯಕವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಕುಟುಂಬ ಸಮೇತ ಭಾಗಿಯಾಗಿ ಕಲಾವಿದರಿಗೆ ಪೆÇ್ರೀತ್ಸಾಹ ನೀಡಿದರು.

‘ಸಾಂಸ್ಕೃತಿಕ ಸಂಜೆ’ ಕಾರ್ಯಕ್ರಮದಲ್ಲಿ ಶ್ರೀಮತಿ ತೇಜಸ್ವಿನಿ ಆ. ದೇಶಪಾಂಡೆ ಅವರಿಂದ ವೀಣಾ ವಾದನ, ಪ್ರಶಾಂತ್ ಚೌಧರಿ ಅವರಿಂದ ಹಾಸ್ಯ ಚಟಾಕಿಗಳು ಶ್ರೀಮತಿ ಪಲ್ಲವಿ ದೇವ ಹುಂಡಿ ಮತ್ತು ಸಂಗಡಿಗರಿಂದ ನೃತ್ಯ ವೈಭವ ಹಾಗೂ ಶ್ರಿ?ಮಂತ್ ರಾಮ್ ಸಿಂಗ್ ಚವಾಣ್ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆದು ನೆರೆದಿದ್ದ ಪ್ರೆ?ಕ್ಷಕರ ಮನರಂಜಿಸಿದವು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಕ ಮುಲ್ಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ, ಕಲಾವಿದರು, ಸಾಹಿತಿಗಳು, ಕಲಾಭಿಮಾನಿಗಳು ಸಂಘಟನೆಯ ಮುಖಂಡರು ಭಾಗವಹಿಸಿದ್ದರು.