
ಶಿವಮೊಗ್ಗ, ಮೇ.24; ಸಂಸದರಾದ ಬಿ.ವೈ.ರಾಘವೇಂದ್ರ ಅವರು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾಪ್ರಬಂಧಕರಾದ ಸಂಜೀವ್ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ರೈಲ್ವೆ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಲು ಮಾನ್ಯ ಸಂಸದರು ರೈಲ್ವೆ ಇಲಾಖೆಯನ್ನು ಒತ್ತಾಯಿಸುತ್ತಲೇ ಇದ್ದರ ಫಲವಾಗಿ ಕೇಂದ್ರ ಸರ್ಕಾರವು 2023-24ರ ಬಜೆಟ್ ನಲ್ಲಿ ಘೋಷಿಸಿದ ‘ಅಮೃತ್ ಭಾರತ್ ಯೋಜನೆ” ಯಡಿ, ರೂ. 22.5 ಕೋಟಿಗಳ ವೆಚ್ಚದಲ್ಲಿ ತಾಳಗುಪ್ಪ ರೈಲ್ವೆ ನಿಲ್ದಾಣವನು ರೂ. 19.28 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣವನ್ನು ಮತ್ತು ರೂ. 21.10 ಕೋಟಿಗಳ ವೆಚ್ಚದಲ್ಲಿ ಸಾಗರ ರೈಲ್ವೆ ನಿಲ್ದಾಣವನ್ನು ಹಾಗೂ ರೂ. 33.00 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ ಗೂಡ್ಸ್ ಯಾರ್ಡನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕೇಂದ್ರ ರೈಲ್ವೆ ಇಲಾಖೆಯು ಅನುದಾನ ಒದಗಿಸಿದೆ.ಪ್ರಯಾಣಿಕ ಸ್ನೇಹಿ ಸವಲತ್ತುಗಳನ್ನು (ಗ್ರಾನೇಟ್ ನೆಲಹಾಸಿನ ಪ್ಲಾಟ್ ಫಾರಂ, ಡಿಜಿಟಲ್ ಸಿಗ್ನಲ್ಸ್, ಪ್ಲಾಟ್ ಫಾರಂ ಶೆಲ್ಪರ್, ಪಾಕಿರ್ಂಗ್ ಜಾಗದಲ್ಲಿ ಶೆಡ್ ನಿರ್ಮಾಣ, ಕಾಂಪೌಂಡ್ ವಾಲ್ ನಿರ್ಮಾಣ, ಸರ್ಕುಲೇಟಿಂಗ್ ಏರಿಯಾ ಅಭಿವೃದ್ಧಿ, ಸ್ಪೇಷನ್ ನಿಲ್ದಾಣದ ಸೌಂದರೀಕರಣ, ನಿಲ್ದಾಣದ ಮುಂಭಾಗದ ಉದ್ಯಾವನ, ಫೂಟ್ ಓವರ್ ಬ್ರಿಡ್, ಆಧುನಿಕ ಶೌಚಾಲಯಗಳು, ಉತ್ತಮ ಗುಣಮಟ್ಟದ ವಿದ್ಯುತ್ ಬೆಳಕಿನ ವ್ಯವಸ್ಥೆ, ಸಿ.ಸಿ.ಟಿ.ವಿ. ರೈಲ್ವೆ ಉದ್ಘೋಷಣಾ ವ್ಯವಸ್ಥೆ ಇಂತಹ ಹಲವಾರು ಸವಲತ್ತುಗಳನ್ನು ಒದಗಿಸುವ ಯೋಜನೆಯು ಮಂಜೂರಾತಿ ಗೊಂಡಿದೆ. ಹಾಗೆಯೇ ಶಿವಮೊಗ್ಗ ಗೂಡ್ಸ್ ಯಾರ್ಡನಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ, ಪಡಿತರ ಧಾನ್ಯ, ಸಿಮೆಂಟ್, ಕಬ್ಬಿಣ ಮತ್ತಿತರ ಅಗತ್ಯ ವಸ್ತುಗಳನ್ನು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕ್ರಮಕೈಗೊಳ್ಳುವುದಾಗಿ ಸಭೆಯಲ್ಲಿ ರೈಲ್ವೆ ಉನ್ನತಾಧಿಕಾರಿಗಳು ತಿಳಿಸಿರುತ್ತಾರೆ.