ಸಾಗರ್ ವಿಷನ್ ಗೆ ಬದ್ಧ: ಮೋದಿ

ನವದೆಹಲಿ,ಜೂ.೧೦-ನೆರೆ ಹೊರೆ ದೇಶದ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಭಾರತ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳೀದ್ದಾರೆ.
ನೆರೆಹೊರೆಗೆ ಮೊದಲು ‘ನೀತಿ ಮತ್ತು ಸಾಗರ್ ವಿಷನ್ ಗೆ ಭಾರತದ ಬದ್ಧತೆ ಮುಂದುವರಿಯಲಿದೆ. ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕ ದಕ್ಷಿಣದ ಧ್ವನಿಯನ್ನು ವರ್ಧಿಸುತ್ತದೆ ಎಂದು ತಿಳಿಸಿದ್ದಾರೆ
ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದ ವಿದೇಶಿ ಮುಖ್ಯಸ್ಥರೊಂದಿಗೆ ನಡೆಸಿದ ಮೊದಲ ಸಭೆಯಲ್ಲಿ ಈ ವಾಗ್ದಾನ ನೀಡಿದ್ದಾರೆ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಸೇರಿದಂತೆ ಭಾರತದ ಹಲವಾರು ನೆರೆಯ ರಾಷ್ಟ್ರಗಳ ನಾಯಕರು ಪ್ರಧಾನಿ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಅವರಿಗೆಲ್ಲಾ ನೆರೆ ಹೊರೆ ದೇಶದ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿ, ‘ನೆರೆಹೊರೆಯ ಮೊದಲ ‘ನೀತಿ ಮತ್ತು ಸಾಗರ್ ವಿಷನ್ಗೆ ಭಾರತದ ಬದ್ಧತೆ ಮುಂದುವರಿಯಲಿದೆ ಎಂದಿದ್ದಾರೆ
ಮೂರನೇ ಅವಧಿಯಲ್ಲಿ ಭಾರತ ನೆರೆ ಹೊರೆ ದೇಶಗಳೊಂದಿಗೆ ನಿಕಟ ಸಹಭಾಗಿತ್ವದಲ್ಲಿ ಈ ಪ್ರದೇಶದ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ. ಈ ಪ್ರದೇಶದಲ್ಲಿ ಜನರ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ
“೨೦೪೭ ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿ ಹೊಂದಲಾಗಿದೆ. ಜನರಿಂದ ಜನರ ನಡುವೆ ಸಂಬಂಧ ಮತ್ತು ಸಂಪರ್ಕಕ್ಕಾಗಿ ಭಾರತ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕ ದಕ್ಷಿಣದ ಧ್ವನಿಯನ್ನು ವರ್ಧಿಸಲು ಕೆಲಸ ಮಾಡುವುದಾಗಿ ಹೇಳಿದ್ದಾರೆ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಕಳೆದ ವರ್ಷ ದ್ವೀಪ ರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಭಾರತಕ್ಕೆ ಮೊದಲ ಭೇಟಿಯಲ್ಲಿದ್ದರು. ಚೀನಾದ ಒಲವಿಗೆ ಹೆಸರಾದ ರಾಜಕಾರಣಿ, ಭಾರತೀಯ ಸೇನಾ ಸಿಬ್ಬಂದಿಯನ್ನು ರಾಷ್ಟ್ರದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ ನಂತರ ಭಾರತದೊಂದಿಗಿನ ಸಂಬಂಧ ಹದಗೆಟ್ಟಿತ್ತು. ಅದನ್ನು ಸರಿ ಮಾಡಿಕೊಳ್ಳಲು ಮುಂದಾಗಿದ್ದಾರೆ.