ಸಾಧಕಿಯರಿಗೆ ಸನ್ಮಾನ

ಆಲಮೇಲ:ಮಾ.14:ಬೆಂಗಳೂರಿನ ಅರಮನೆಯ ಮೈದಾನದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕಿಯರಿಗೆ ಸರಕಾರದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಯಿತು. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಾಗೂ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಕ್ಷೇತ್ರದಲ್ಲಿ ತಮ್ಮ ಸಂಸ್ಥೆಯ ಮೂಲಕ ಅಮೂಲ್ಯವಾದ ಸೇವೆ ಸಲ್ಲಿಸಿದಕ್ಕಾಗಿ ಆಲಮೇಲ ಪಟ್ಟಣದ ಶ್ರೀಮತಿ ಮಂಗಳಾ ಗುಡಿಮಠ ಸಂಸ್ಥೆಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ,ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತ್ತರಿದ್ದರು.