ಸಾಧಿಸದಿದ್ದರೆ ಜೀವನ ವ್ಯರ್ಥ: ಬಸವರಾಜ ದೇಶಮುಖ

ಬೀದರ್:ಸೆ.26: ಏನನ್ನೂ ಸಾಧಿಸದಿದ್ದರೆ ಜೀವನ ವ್ಯರ್ಥ ಎಂದು ಕಲಬುರ್ಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ಶರಣಬಸವ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಶರಣಬಸವ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ್ ತಾಲ್ಲೂಕಿನ ಗೋರನಳ್ಳಿಯ ಶರಣಬಸವ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಛಲ ಇದ್ದರೆ ಜೀವನದಲ್ಲಿ ಸಾಧನೆ ಸಲೀಸು. ಪ್ರತಿಯೊಬ್ಬರಲ್ಲೂ ಸಾಧಿಸಿಯೇ ತೀರುವ ಛಲ ಇರಬೇಕು ಎಂದು ಹೇಳಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ನಿವೃತ್ತ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಮಾತನಾಡಿ, ಮಕ್ಕಳು ಮಹಾ ಪುರುಷರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ, ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ವಿಠ್ಠಲದಾಸ ಪ್ಯಾಗೆ, ಶ್ರಮಜೀವಿ ಶಾಲೆ ಅಧ್ಯಕ್ಷ ವೆಂಕಟೇಶರಾವ್ ಮಾಯಿಂದೆ ಮಾತನಾಡಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಶರಣಬಸವ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ಬಿ. ಪ್ರತಾಪುರ ಉಪಸ್ಥಿತರಿದ್ದರು. ಸಿದ್ದಾರೆಡ್ಡಿ ವಂದಿಸಿದರು.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಮಾದರಿಗಳು ಗಮನ ಸೆಳೆದವು.