ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ


ಗದಗ, ಫೆ.9: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಪೆÇಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ , ಆರ್.ಟಿ.ಇ. ಕಾಯ್ದೆ , ಫೆÇೀಕ್ಸೋ ಕಾಯ್ದೆ , ಬಾಲಕಾರ್ಮಿಕ ಹಾಗೂ ಬಿಕ್ಷಾಟನೆ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಗಳ ಕುರಿತು ವಸತಿ ಶಾಲೆಗಳ ಪ್ರಾಂಶುಪಾಲರು , ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಸರಕಾರಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಕೆ. ಗುರುಪ್ರಸಾದ ಅವರು ಮಾತನಾಡುತ್ತಾ ಪೆÇೀಕ್ಸೋ ಕಾಯ್ದೆ, ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ಕಾಯ್ದೆಗಳ ಕುರಿತು ಪ್ರತಿಯೊಬ್ಬರಿಗೂ ತಿಳುವಳಿಕೆ ಇರಬೇಕು. ಬಾಲನ್ಯಾಯ ಕಾಯ್ದೆಯಲ್ಲಿ 18 ವರ್ಷದೊಳಗಿನ ಮಗು ಹಾಗೂ ವ್ಯಕ್ತಿಯನ್ನು ಬಾಲಾಪರಾಧಿ ಎಂದು ಹೇಳಿವುದಿಲ್ಲಾ “ಕಾನೂನು ಸಂಘರ್ಷಕ್ಕೊಳಪಟ್ಟ ಮಗು” ಎಂದು ಕರೆಯಲಾಗುತ್ತದೆ. ಇಂತಹ ಮಕ್ಕಳನ್ನು ಸಾಮಾನ್ಯವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಿಲ್ಲ ಅದರ ಬದಲಾಗಿ ಬಾಲನ್ಯಾಯ ಮಂಡಳಿಯಲ್ಲಿ ಹಾಜರುಪಡಿಸಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಮಾತನಾಡಿ ಎಲ್ಲಾ ಮುಖ್ಯೋಪಾಧ್ಯಾಯರುಗಳು ಬಾಲ್ಯವಿವಾಹ ನಿಷೇಧಾಧಿಕಾರಿಗಳಾಗಿರುತ್ತಾರೆ. ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ಇರಬೇಕು. ಅದೇ ರೀತಿ ಹಾಸ್ಟೇಲ್ ವಾರ್ಡನ್‍ಗಳು ಕೂಡಾ ಮಕ್ಕಳಿಗೆ ಸಂಬಂಧಿಸಿದ ನೀತಿ, ನಿಯಮಗಳನ್ನು ತಿಳಿದುಕೊಂಡು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಹರೀಶ ಜೋಗಿ ಅವರು ಮಕ್ಕಳ ಹಕ್ಕುಗಳ, ಬಾಲ್ಯವಿವಾಹ ನಿಷೇದ ಕಾಯ್ದೆ ಕುರಿತು ಉಪನ್ಯಾಸ ನೀಡಿದರು ಹಾಗೂ ಸಿಸ್ಟರ್ ಡುಲ್ಸಿನ್, ಬಾಲನ್ಯಾಯ ಕಾಯ್ದೆ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ಕುರಿತು, ದತ್ತು ಮಾರ್ಗಸೂಚಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂಗ ವರಗಪ್ಪನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ ಬಿದರಿ, ಪೆÇಲೀಸ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳೂ ಹಾಜರಿದ್ದರು
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರಫೀಕಾ ಹಳ್ಳೂರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿದರು.