ಸಾಮಥ್ರ್ಯ ಅಭಿವೃದ್ಧಿ ಮತ್ತು ತರಬೇತಿ ಕಾರ್ಯಕ್ರಮ

ಕಲಬುರಗಿ,ಮಾ.16:ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಡೇ-ನಲ್ಮ್ ಯೋಜನೆಯಡಿ ಉತ್ತರ ವಲಯದ 16 ರಿಂದ 32 ವಾರ್ಡ್‍ಗಳ ಸ್ವ-ಸಹಾಯ ಗುಂಪುಗಳಿಗೆ ದಶಸೂತ್ರಗಳ ಕುರಿತು ಕಲಬುರಗಿಯ ಶಿವಾಜಿನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಸಾಮಥ್ರ್ಯ ಅಭಿವೃದ್ಧಿ ಮತ್ತು ತರಬೇತಿ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿಗಳಾದ ವಿಜಯಲಕ್ಷ್ಮಿ ಪಟ್ಟೇದಾರ್ ಅವರು ಗುರುವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವಾನಂದ ಬಿಲಗುಂದಿ ಉಪಸ್ಥಿತರಿದ್ದರು. ರಾಜಕುಮಾರ್ ಮುನ್ನಳ್ಳಿ, ನಾಗಯ್ಯ ಹಿರೇಮಠ ಸಂಪನ್ಮೂಲ ವ್ಯಕ್ತಿಗಳಾಗಿ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ದಶ ಸೂತ್ರಗಳ ಬಗ್ಗೆ ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಡೇ ನಲ್ಮ್ ಶಾಖೆಯ ಸಮುದಾಯ ಸಂಘಟನಾಧಿಕಾರಿಗಳಾದ ನಾಗಮ್ಮ ಸಿ ಬೆನಕನಳ್ಳಿ, ಶಕೀಲ ಗುನ್ನಾಪುರ ಉಪಸ್ಥಿತರಿದ್ದರು.