ಸಾಮಾಜಿಕ ಜಾಲತಾಣಗಳ ತೀವ್ರ ನಿಗಾ ಇರಿಸುವಂತೆ ಅಧಿಕಾರಿಗಳಿಗೆ ಸೂಚನೆ

ವಿಜಯಪುರ:ಎ.14: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಗುರುವಾರ ಜಿಲ್ಲಾ ಮಾಧ್ಯಮ ಪರಿಶೀಲನಾ ಕೋಶ ಸಮಿತಿಯ ಸಭೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳು ಅತ್ಯಂತ ಮುತುವರ್ಜಿಯಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ನಿಯೋಜಿತ ಸಮಿತಿ ಯೂಟೂಬ್, ಇನ್ಸಟ್ರಾಗಾಂ, ಟ್ವಿಟರ್ ಹಾಗೂ ವ್ಯಾಟ್ಸ್‍ಪಗಳ ಮೇಲೆ ತೀವ್ರ ನಿಗಾ ಇಡಬೇಕು. ಜಾಹೀರಾತು ವೆಚ್ಚ ಕುರಿತು ಸಮಿತಿ ಕೂಲಂಕೂಷವಾಗಿ ಪರಿಶೀಲನೆ ನಡೆಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮನವರಿ ಮಾಡಿಕೊಂಡ ನಂತರವೇ ಸರ್ಟಿಫೀಕೇಟ್ ನೀಡಬೇಕು. ದೃಶ್ಯ ಮಾಧ್ಯಮ, ಪತ್ರಿಕೆಗಳ್ಲಲಿ ಬರುವಂತಹ ಜಾಹೀರಾತಿನ ಮೇಲೆ ತೀವ್ರ ನಿಗಾ ವಹಿಸುವ ಮೂಲಕ ಚುನಾವಣೆ ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಈಗಾಗಲೇ ಸಲ್ಲಿಕೆಯಾಗಿದ್ದÀ ಪೂರ್ವಪ್ರಮಾಣ ಪ್ರಸ್ತಾವನೆಗಳನ್ನು ಕೂಲಂಕೂಷವಾಗಿ ನಿಯಮಾನುಸಾರ ನಿಗದಿತ ಕಾಲಾವಧಿಯಲ್ಲಿ ಪರಿಶೀಲನೆ ನಡೆಸಿ ಅನುಮತಿಸಲಾಗಿದೆ. ಅನುಮತಿಗಾಗಿ ಬರುವ ಪ್ರಸ್ತಾವನೆಗಳನ್ನು ತ್ವರಿತಗತಿಯಲ್ಲಿ ಪರಿಶೀಲನೆ ನಡೆಸಿ, ವಿಲೇವಾರಿ ಮಾಡಬೇಕು. ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಮಾಹಿತಿ ಒದಗಿಸಬೇಕು. ಅಭ್ಯರ್ಥಿಗಳಿಂದ ಮುಂಚಿತವಾಗಿ ನಿಗದಿತ ನಮೂನೆಯಲ್ಲಿ ಎಲ್ಲ ಅವಶ್ಯಕ ವಿವರ ಹಾಗೂ ಜಾಹೀರಾತು ವಿಷಯದ ಸಂಪೂರ್ಣ ವಿವರದ ದೃಡೀಕರಿಸಿದ ಸಾಫ್ಟ್ ಕಾಫಿ ಬರವಣಿಗೆ ರೂಪದ ತಲಾ ಎರಡು ಪ್ರತಿಗಳನ್ನು ಪಡೆದು ನಿಯಮನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಾವತಿ ಸುದ್ದಿ, ಕಾಸಿಗಾಗಿ ಸುದ್ದಿ ಪ್ರಕಟಿಸುವಂತಿಲ್ಲ. ಈ ಕುರಿತು ತೀವ್ರ ನಿಗಾ ವಹಿಸಬೇಕು. ಮತದಾರರ ಮೇಲೆ ಪ್ರಭಾವ ಬೀರುವ ಸುದ್ದಿಗಳನ್ನು ಪ್ರಕಟಿಸದಂತೆ ಕ್ರಮ ವಹಿಸಬೇಕು. ಬಲ್ಕ್ ಎಸ್‍ಎಂಸ್ ಮೇಲೆ ನಿಗಾ ಇಡಬೇಕು. ಪ್ರತಿದಿನ ಪತ್ರಿಕೆ ಮತ್ತು ಸ್ಥಳೀಯ ಹಾಗೂ ಎಲ್ಲ ಟಿವಿ ಚಾನೆಲ್ ಪ್ರಸಾರವನ್ನು ಗಮನಿಸಬೇಕು. ಕ್ರೀಯಾಶೀಲತೆಯಿಂದ ಕಾರ್ಯನಿರ್ವಹಿಸಿ ಮುಕ್ತ ನ್ಯಾಯ ಸಮ್ಮತ ಚುನಾವಣೆಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಈಗಾಗಲೇ ರಚಿಸಿದ ಜಿಲ್ಲಾ ಮಾಧ್ಯಮ ಪರಿಶೀಲನಾ ಕೋಶದ ಜಿಲ್ಲಾ ನೋಡಲ್ ಅಧಿಕಾರಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ (ಮೊ:9740379500), ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ (9880248139), ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ಪಿ.ಜಿ.ತಡಸದ (9448180973), ಪ್ರೊ ಶ್ರೀಮತಿ ವಿಜಯ ಕೋರಿಶೆಟ್ಟಿ (8496059098), ಪ್ರೊ.ಅಜೀಜ್ ಮಕಾನದಾರ (9845051097), ಮಹಿಳಾ ವಿಶ್ವವಿದ್ಯಾಲಯದ ಪ್ರೊ: ಸಂದೀಪ (ಮೊ:9844681398) ಇವರು ಸದಸ್ಯರಾಗಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾಧಿಕಾರಿಗಳಾದ ಅಮರೇಶ ದೊಡಮನಿ (ಮೊ:9560872758) ಅವರು ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ, ಫೇಸ್‍ಬುಕ್ ಹಾಗೂ ವೆಬ್‍ಪೋರ್ಟಲ್, ಇನಸ್ಟಾಗ್ರಾಂ, ಟ್ವಿಟರ್, ವ್ಯಾಟ್ಸ್‍ಪ್ ಯೂಟೂಬ್ ಇನ್ನಿತರ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಯಿತು. ಜಿಲ್ಲಾ ಮಾಧ್ಯಮ ಪ್ರಮಾಣೀಕರ ಮತ್ತು ಮಾಧ್ಯಮ ಕಣ್ಗಾವಲು ಸಮಿತಿಯು ಜಿಲ್ಲಾಧಿಕಾರಿಗಳ ಆವರಣದ ನಗರಾಭಿವೃದ್ದಿ ಕೋಶದ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಿಳಾ ವಿಶ್ವವಿದ್ಯಾಲಯದ ಪ್ರೊ: ಓಂಕಾರ ಕಾಕಡೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.