ಸಾಮಾಜಿಕ ಪರಿವರ್ತನೆಯ ಹರಿಕಾರ, ಶ್ರೇಷ್ಠ ಸಮಾಜ ಸುಧಾರಕ ಡಿ.ದೇವರಾಜ ಅರಸು

ಅಥಣಿ :ಆ.21: ಶ್ರೇಷ್ಠ ಸಮಾಜ ಸುಧಾರಕರು, ಸಾಮಾಜಿಕ ಪರಿವರ್ತನೆಯ ಹರಿಕಾರರಾದ
ಡಿ. ದೇವರಾಜ ಅರಸು ಅವರ ಜೀವನ ಆದರ್ಶಗಳು ಪ್ರತಿಯೊಬ್ಬರಿಗೆ ಮಾರ್ಗದರ್ಶನವಾಗಿವೆ. ನಾಡಿನ ಜನತೆಗೆ ಅವರು ನೀಡಿದ ಕೊಡುಗೆ ಅನನ್ಯವಾಗಿದೆ. ದುರ್ಬಲರು, ಹಿಂದುಳಿದವರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ಡಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಎಂದು ತಹಶೀಲ್ದಾರ ರಾಜೇಶ್ ಬುರ್ಲಿ ಹೇಳಿದರು,
ಅವರು ಅವರು ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಅಥಣಿ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥಣಿ ವತಿಯಿಂದ ಡಿ ದೇವರಾಜ ಅರಸು ಅವರ 108 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿ ದೇವರಾಜ ಅರಸರು ರಾಜ್ಯದಲ್ಲಿನ ಬಡತನ ಹಾಗೂ ಹಸಿವು ನೀಗಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದರು.
ಹಿಂದುಳಿದ ವರ್ಗಗಳ ಸಮುದಾಯಗಳ ಮೀಸಲಾತಿ, ಶಿಕ್ಷಣ ಹಾಗೂ ಸಾಮಾಜಿಕ ಪರಿವರ್ತನೆಗಾಗಿ ಹಗಲಿರುಳು ಶ್ರಮಿಸಿದ ಮಹಾನ್ ನಾಯಕರಾಗಿದ್ದರು, ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿದ ಕೀರ್ತಿ ಸೇರಿದಂತೆ ಅನೇಕ ವಿಶಿಷ್ಟ ಹಾಗೂ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಸಮಾಜಕ್ಕೆ ಅವರ ಕೊಡುಗೆಗಳು ಅಪಾರ. ಇಂತಹ ಆದರ್ಶ ವ್ಯಕ್ತಿಗಳು ನಮಗೆ ಮತ್ತು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಎಂದರು,
ಈ ವೇಳೆ ಉಪನ್ಯಾಸಕರಾಗಿ ಆಗಮಿಸಿದ ಜೆಎ ಕಾಲೇಜಿನ ಉಪನ್ಯಾಸಕ ಮಹಾಲಿಂಗ ಮೇತ್ರಿ ಮಾತನಾಡಿ ಡಿ.ದೇವರಾಜು ಅರಸು ಅವರು ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಕೇಂದ್ರ ಸರ್ಕಾರದ 20 ಅಂಶಗಳ ಯೋಜನೆ ಹಾಗೂ ‘ಉಳುವವನೇ ಭೂಮಿ ಒಡೆಯ ಕಾಯ್ದೆಯನ್ನು ಜಾರಿಗೊಳಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ತರುವಲ್ಲಿ ಯಶಸ್ವಿಯಾಗಿದ್ದಾರೆ, ಜೀತದಾಳು ಹಾಗೂ ಮಲಹೊರುವ ಪದ್ಧತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಶಿಕ್ಷಣದಲ್ಲಿ ಸಮಾನತೆ?ಕಲ್ಪಿಸುವ ಮೂಲಕ ಸಮಾಜಮುಖಿ ಕೆಲಸ ಮಾಡಿದರು. ಜನಸಂಖ್ಯೆ ಅಧಾರದಲ್ಲಿ ಮೀಸಲಾತಿ ಕಲ್ಪಿಸಿ ಸಹಾಯಧನದ ನೆರವು ನೀಡಿದರು. ಮೌನಕ್ರಾಂತಿ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದರು’ ಎಂದು ಅವರ ಸಾಧನೆ ಸ್ಮರಿಸಿದರು,
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ತಾಲೂಕಾ ವಿಸ್ತೀರ್ಣಾಧಿಕಾರಿ ವೆಂಕಟೇಶ್ ಕುಲಕರ್ಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ದಿ| ಡಿ.ದೇವರಾಜ ಅರಸು ಅವರು ಸಾಮಾಜಿಕ ಸಮಾನತೆ ಹಿತದೃಷ್ಟಿಯಿಂದ ಹಿಂದುಳಿದ ವರ್ಗದವರಿಗಾಗಿ ಹಾಗೂ ಕಡುಬಡವರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಿ ಬಡವರ ಬದುಕಿನಲ್ಲಿ ಆಶಾಕಿರಣ ಮೂಡಿಸಿದವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರು ‘ಸರ್ವರಿಗೂ ಸಮಬಾಳು ಮತ್ತು ಸರ್ವರಿಗೂ ಸಮಪಾಲು ಕಲ್ಪಿಸಲು ಅರಸು ಸಾಕಷ್ಟು ಶ್ರಮಿಸಿದರು. ಅವರು ಅನುಷ್ಠಾನಗೊಳಿಸಿದ ಯೋಜನೆಗಳು ಸಮಾಜಕ್ಕೆ ದಾರಿದೀಪ’ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೀತಲ ಹೊಂಗಲ್, ಜಿಪಂ ಸಹಾಯಕ ಅಭಿಯಂತರ ವೀರಣ್ಣ ವಾಲಿ, ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ, ಕ್ಷೇತ್ರ ಸಮನ್ವಯಾಧಿಕಾರಿ ಗೌಡಪ್ಪ ಖೋತ, ಕೃಷಿ ಇಲಾಖೆಯ ಅಧಿಕಾರಿ ನಿಂಗನಗೌಡ ಬಿರಾದಾರ, ಸತೀಶ್ ಬಸಗೌಡರ, ನಿಲಯ ಪಾಲಕರಾದ ಅಶೋಕ ಸತ್ತಿಗೌಡರ, ಬಿ ಆರ್ ಯಲ್ಲಟ್ಟಿ, ಕೇದಾರಿ ಬಾಗಿ, ಪರಸಪ್ಪ ಮಳಗೊಂಡ, ಪಾರ್ವತಿ ಮಲಗೌಡರ, ಮಹೇಶ ಗಾಡಿವಡ್ಡರ್, ಮನೋಹರ ಬ್ಯಾಕೋಡ, ಸೇರಿದಂತೆ ಹಲವರು ಉಪಸ್ಥಿತರಿದ್ದರು
ನಿಲಯ ಪಾಲಕ ಅಶೋಕ ಸತ್ತಿಗೌಡರ ವಂದಿಸಿದರು, ಶಿಕ್ಷಕ ಸಂಗಮೇಶ ಹಚಡದ ಕಾರ್ಯಕ್ರಮ ನಿರೂಪಿಸಿದರು,