ಕೋಲಾರ,ಏ,೧೧:ಬಡವರು, ರೈತರು, ಮಹಿಳೆಯರು ಸೇರಿದಂತೆ ಸಾಮಾನ್ಯ ವರ್ಗದ ಹಿತ ಕಾಪಾಡುವುದೇ ಜೆಡಿಎಸ್ ಪಕ್ಷದ ಗುರಿಯಾಗಿದ್ದು, ಈ ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಮತದಾರರಲ್ಲಿ ಮನವಿ ಮಾಡಿದರು
ನಗರಸಭೆ ವ್ಯಾಪ್ತಿಯ ಕುರುಬರಪೇಟೆಯಲ್ಲಿ ಜೆಡಿಎಸ್ ಪಕ್ಷದಿಂದ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಸಂದರ್ಭದಲ್ಲಿ ಅವರು ಮಾತನಾಡಿ, ರಾಜ್ಯಾದ್ಯಂತ ಜೆಡಿಎಸ್ ಪಕ್ಷವು ಪಂಚರತ್ನ ಯೋಜನೆಯ ಮೂಲಕ ಉಚಿತ ಶಿಕ್ಷಣ, ಆರೋಗ್ಯ, ವಸತಿ, ಮಹಿಳಾ ಸಬಲೀಕರಣ, ಮಹಿಳಾ ಸಂಘಗಳ ಸಾಲಮನ್ನಾ, ಜೊತೆಗೆ ಸಂಕಷ್ಟದಲ್ಲಿರುವ ರೈತರ ಸಾಲಮನ್ನಾ ಸೇರಿದಂತೆ ರೈತರ ಹಿತ ಕಾಪಾಡಲು ಮುಂದಾಗಿದೆ ಎಂದರು.
ಪ್ರತಿಯೊಬ್ಬರೂ ಜೆಡಿಎಸ್‌ಗೆ ಮತ ನೀಡುವ ಮೂಲಕ ಬೆಂಬಲಿಸಿದರೆ ಪಂಚರತ್ನ ಯೋಜನೆಗಳನ್ನು ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಅನಿಟ್ಟಿನಲ್ಲಿ ಈ ಬಾರಿ ಜೆಡಿಎಸ್‌ಗೆ ಮತ ನೀಡುವಂತೆ ಕೋರಿದರು.
ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಮಾಜಿ ಜಿಪಂ ಸದಸ್ಯ ಬಾಲಾಜಿ ಚನ್ನಯ್ಯ,ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಣಕನಹಳ್ಳಿ ನಟರಾಜ್, ಬಲಿಜ ಸಂಘದ ಅಶೋಕ್, ನಗರಸಭೆ ಸದಸ್ಯ ರಾಕೇಶ್ ಇದ್ದರು,