ಸಾಮಾನ್ಯ ಜೈವಿಕ-ವೈದ್ಯಕೀಯ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯ

ಕಲಬುರಗಿ,ನ.24: ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ನಿಯಮಗಳು-2016 ಮತ್ತು ಅದರ ನಿಯತಕಾಲಿಕ ತಿದ್ದುಪಡಿಗಳು ಮತ್ತು ಕೇಂದ್ರಿಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಷ್ಕøತ ಮಾರ್ಗಸೂಚಿಯಂತೆ ಕಲಬುರಗಿ ಜಿಲ್ಲೆಯಲ್ಲಿ ಸಾಮಾನ್ಯ ಜೈವಿಕ-ವೈದ್ಯಕೀಯ ತ್ಯಾಜ್ಯ ಸಂಗ್ರಹಣೆ, ಸಾಗಣಿಕೆ, ಪ್ರತ್ಯೇಕತೆ, ಚಿಕಿತ್ಸೆ ಹಾಗೂ ಅಂತಿಮ ವಿಲೇವಾರಿಗೆ ಸಾಮಾನ್ಯ ಜೈವಿಕ-ವೈದ್ಯಕೀಯ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯ ಸ್ಥಾಪನೆಗಾಗಿ ಅರ್ಹರಿಂದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಆಹ್ವಾನಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ರಕ್ಷಣಾ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಸಮಿತಿಯ ಅಧ್ಯಕ್ಷ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಹೆಸರಾಂತ ಕಂಪನಿಗಳು, ಏಜೆನ್ಸಿಗಳು, ವ್ಯಕ್ತಿಗಳು, ಸಂಸ್ಥೆಗಳು ತಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು(ಇoI) ದಿ.8-12-2022ರ ಸಾಯಂಕಾಲ 5 ಗಂಟೆಗಳ ಒಳಗಾಗಿ ಮೊಹರು ಮಾಡಿದ ಲಕೋಟೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಜಿಲ್ಲಾ ಆರೋಗ್ಯ ರಕ್ಷಣಾ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಸಮಿತಿ, ಕಲಬುರಗಿ ಇವರಿಗೆ ಸಲ್ಲಿಸಬೇಕು.
ಡಿ.8 ರಂದೇ ಸಾಯಂಕಾಲ 5.30 ಗಂಟೆಗೆ ಆಸಕ್ತಿಯ ಅಭಿವ್ಯಕಿಪಡಿಸಿದ ವ್ಯಕ್ತಿ, ಸಂಸ್ಥೆ ಅಥವಾ ಅವರ ಅಧಿಕೃತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲಕೋಟೆ ತೆರೆಯಲಾಗುವುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವು ರಜೆಯಾಗಿದ್ದರೆ, ಮುಂದಿನ ಕೆಲಸದ ದಿನದಂದು ಲಕೋಟೆ ತೆರೆಯಲಾಗುವುದು.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ರಕ್ಷಣಾ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಸಮಿತಿಯ ಅಧ್ಯಕ್ಷರು ಯಾವುದೇ ಕಾರಣವನ್ನು ನೀಡದೆ ಪ್ರಕ್ರಿಯೆಯನ್ನು ತಿರಸ್ಕರಿಸುವ ಅಥವಾ ಸ್ವೀಕರಿಸುವ, ಮಾರ್ಪಡಿಸುವ, ಹಿಂತೆಗೆದುಕೊಳ್ಳುವ ಅಥವಾ ರದ್ದುಗೊಳಿಸುವ ಹಕ್ಕುಗಳನ್ನು ಕಾಯ್ದಿರಿಸಿಕೊಂಡಿರುತ್ತಾರೆ.