ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಿ

ದಾವಣಗೆರೆ; ಮೇ.18; ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ಮತ್ತು 21 ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಜಿಲ್ಲೆಯ 9944 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಪರೀಕ್ಷಾ ಕೇಂದ್ರಗಳ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪಾರದರ್ಶಕ ಹಾಗೂ ಸುವಸ್ಥಿತವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ವೀಕ್ಷಕರ ಪಾತ್ರ ಬಹಳ ಮುಖ್ಯವಾಗಿದ್ದು, ಪರೀಕ್ಷಾ ಅವಧಿ ಆರಂಭದ ಮೊದಲು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ, ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಬಗ್ಗೆ ಪರೀಶಿಲಿಸಬೇಕು.ಮೇ.20 ರಂದು ಬೆಳಿಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ ವಿಷಯದ ಬಗ್ಗೆ ಪರೀಕ್ಷೆ ನಡೆಯಲಿದೆ. ಹಾಗೂ 21 ರಂದು ಬೆಳಿಗ್ಗೆ 10.30 ರಿಂದ 11.50ರವರೆಗೆ ಭೌತಶಾಸ್ತ್ರ ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ವಿಷಯ ಕುರಿತು ಪರೀಕ್ಷೆ ನಡೆಯಲಿದೆ.ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಗಡಿಯಾರ ಹಾಗೂ ಸಿಸಿ ಕ್ಯಾಮರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯ ಮಕ್ಕಳು ಸಿಇಟಿ ಪರೀಕ್ಷೆ ಬರೆಯುತ್ತಿರಬಾರದು ಎಂದರು.20 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಪರೀಕ್ಷೆ ನಡೆಯುವ ದಿನದಂದು ಸಾರ್ವಜನಿಕ ಪ್ರವೇಶಕ್ಕೆ ನಿμÉೀಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಲು ಜಿಲ್ಲಾ ಪೆÇಲೀಸ್ ಅಧೀಕ್ಷಕರು ಕ್ರಮ ಕೈಗೊಳ್ಳಬೇಕು ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿμÁ್ಠಧಿಕಾರಿ ರಾಮಗೊಂಡ ಬಸರಗಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ವಾಸಂತಿ ಉಪ್ಪಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.