ಸಾರವರ್ಧಿತ ಅಕ್ಕಿ ಉಪಯೋಗಿಸಲು ಜಿಲ್ಲಾಧಿಕಾರಿಗಳ ಮನವಿ

ವಿಜಯಪುರ ಮೇ 14: ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಗುರುಡುತನದಂತಹ ರೋಗಗಳು ಬರಬಹುದಾಗಿದೆ. ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಪ್ಪಿಸಲು ಹೆಚ್ಚಿನ ಪೆÇೀಷಕಾಂಶದ ಅಗತ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೆÇೀಷಕಾಂಶ ( ವಿಟಾಮಿನ್ ಎ ಮತ್ತು ಡಿ. ಐರನ್, ಫೆÇೀಲಿಕ್ ಆಸಿಡ್, ಬಿಕಾಂಪ್ಲೆಕ್ಸ್, ಜಿಂಕ್ ಹಾಗೂ ಐಯೋಡಿನ್ ) ಭರಿತ ಸಾರವರ್ಧಿತ ಅಕ್ಕಿಯಲ್ಲಿ ಬೆರೆಸಿ 2022ನೇ ಮೇ ತಿಂಗಳಿನಿಂದ ನ್ಯಾಯ ಬೆಲೆ ಅಂಗಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ. ಸಾರವರ್ದಿತಗೊಳಿಸಿರುವ (ಪೆÇೀರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗದೇ ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ ಆರೋಗ್ಯವಂತಾರಾಗಲು ಕೋರಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹ ಕುಟುಂಬಕ್ಕೆ ಅಕ್ಕಿಯನ್ನು ಸ್ವಂತಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಅವರು ತಿಳಿಸಿದ್ದಾರೆ.