ಸಾರಿಗೆ ನೌಕರರ ಕುಟುಂಬಸ್ಥರಿಂದ ಪ್ರತಿಭಟನೆ

ಹುಬ್ಬಳ್ಳಿ ಏ 12: ಆರನೇ ವೇತನ ಅನ್ವಯ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ರಾಜ್ಯಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಸಾರಿಗೆ ನೌಕರರ ಕುಟುಂಬಸ್ಥರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ನಗರದ ಗೋಕುಲ ರಸ್ತೆಯಲ್ಲಿರುವ ಸಾರಿಗೆ ಸಂಸ್ಥೆ ವಸತಿ ಗೃಹಗಳ ಎದುರು ಮನೆಯಿಂದ ಹೊರ ಬಂದ ಮಹಿಳೆಯರು ಹಾಗೂ ಮಕ್ಕಳು ಕೈಯಲ್ಲಿ ಪ್ಲೇಟ್, ಲೋಟಾ ಹಿಡಿದು ಬಾರಿಸುವ ಮೂಲಕ ಸಾರಿಗೆ ಸಂಸ್ಥೆ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವುದು ತಪ್ಪಿದಲ್ಲಿ ವಸತಿ ಗೃಹ ಹಂಚಿಕೆಯನ್ನು ರದ್ದುಗೊಳಿಸುವುದರೊಂದಿಗೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ನೋಟೀಸಗಳನ್ನು ಅಂಟಿಸಿ ಹೋಗಿದ್ದು ಖಂಡನೀಯ. ಈ ನಿಯಮ ಸರಿಯಲ್ಲ ಎಂದು ವಸತಿಗೃಹದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಗೆ ಪೆÇಲೀಸರು ಅವಕಾಶ ನೀಡದೇ ಇರುವುದರಿಂದ ಪೆÇಲೀಸರು ಮತ್ತು ಸಾರಿಗೆ ನೌಕರರ ಕುಟುಂಬಸ್ಥರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.