ಸಾರಿಗೆ ನೌಕರರ ಮುಷ್ಕರ:ಬಸ್ ಡಿಪೋ ಹಾಗೂ ಬಸ್ ನಿಲ್ದಾಣಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಡಿ.ಸಿ. ಆದೇಶ

ಕಲಬುರಗಿ,ಏ.7.:ರಸ್ತೆ ಸಾರಿಗೆ ನೌಕರರು ಬುಧವಾರ ಏಪ್ರಿಲ್ 7 ರಂದು ಮುಷ್ಕರ ನಡೆಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಸರ್ಕಾರದ ಆಸ್ತಿ ರಕ್ಷಣೆ ಮತ್ತು ಕರ್ತವ್ಯನಿರತ ಸಿಬ್ಬಂದಿಗಳ ಭದ್ರತೆಗಾಗಿ ಕಲಬುರಗಿ ಜಿಲ್ಲೆಯ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಚಿಂಚೋಳಿ, ಸೇಡಂ ಹಾಗೂ ಕಾಳಗಿ ಬಸ್ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬುಧವಾರ ಏಪ್ರಿಲ್ 7 ರ ಬೆಳಗಿನ 6 ರಿಂದ ರಾತ್ರಿ 10 ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮೇಲ್ಕಂಡ ನಿಷೇಧಾಜ್ಞೆ ಜಾರಿಗೊಳಿಸಿರುವ ಸ್ಥಳಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಆಸ್ತಿಗಳಿಗೆ ಹಾನಿ ಮಾಡುವಂತಹ ಮಾರಕಾಸ್ತ್ರಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಗುಂಪು-ಗುಂಪಾಗಿ ಚಲಿಸುವುದು, ಸರ್ಕಾರ ವಿರುದ್ಧ ಘೋಷಣೆ ಕೂಗುವುದು ಹಾಗೂ ಅನಾವಶ್ಯಕವಾಗಿ ಕಾರಣ ರಹಿತವಾಗಿ ಸಂಚರಿಸುವಂತಿಲ್ಲ ಎಂದು ಅವರು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.