ಸಾರಿಗೆ ನೌಕರರ ಮುಷ್ಕರ ಅಂತ್ಯ: ಕೋಡಿಹಳ್ಳಿ ಘೋಷಣೆ

ಬೆಂಗಳೂರು, ಏ.‌,21- ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ 15 ದಿನಗಳಿಂದ ನಡೆಸುತ್ತಿದ್ದ ಸಾರಿಗೆ ನೌಕರರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮುಷ್ಕರ ಅಂತ್ಯಗೊಳಿಸಿ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.
ನ್ಯಾಯಾಲಯಕ್ಕೆ ಗೌರವ ಕೊಟ್ಟು ಮುಷ್ಕರ ತಾತ್ಕಾಲಿಕ ವಾಗಿ ಮುಷ್ಕರ ವಾಪಸ್ ಪಡೆದಿದ್ದೇವೆ. ಹೋರಾಟ ನಮ್ಮ ಮೂಲಭೂತ ಹಕ್ಕು. ಅದನ್ನು ಕಸಿದುಕೊಳ್ಖುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ನಮ್ಮ ನ್ಯಾಯಯುತ ಬೇಡಿಕೆಗಳ ಬಗ್ಗೆ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಬಸ್ ಸಂಚಾರ ಪುನರಾರಂಭಗೊಳ್ಳಲಿದೆ ಎಂದರು.
ಆದರೆ ನೌಕರರ ವಜಾ ಮತ್ತು ಅಮಾನತು, ವರ್ಗಾವಣೆ ಮಾಡಿರುವ ಸುಮಾರು 20 ಸಾವಿರ ನೌಕರರು ವಿರುದ್ದ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಕೋಡಿಹಳ್ಳಿ ಆಗ್ರಹಿಸಿದರು.