ಸಾರಿಗೆ ನೌಕರರ ಮುಷ್ಕರ ಅಂತ್ಯ: ನಿಟ್ಟುಸಿರು ಬಿಟ್ಟ ಬೀದರ್ ಜನ

ಬೀದರ:ಎ.22: 6 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಬೀದರ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಸಾರಿಗೆ ನೌಕರರ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿ ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಮೂರ್ತಿಗಳ ಸೂಚನೆ ನೀಡಿದ್ದರು..

ಆದರಿಂದ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ಘೋಷಿಸಿದ ಹಿನ್ನೆಲೆ ಹೈಕೋರ್ಟ್ ಆದೇಶಕ್ಕೆ ಗೌರವಿಸಿ ಕರ್ತವ್ಯಕ್ಕೆ ಸಾರಿಗೆ ನೌಕರರು ಹಾಜರಾಗಿದ್ದಾರೆ.. ಜಿಲ್ಲೆಯ ಯಿಂದ ಎಲ್ಲಾ ಕೇಂದ್ರ ಕ್ಕೂ ಬಸ್ ಸಂಚಾರ ಆರಂಭ ಗೊಂಡಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದ ಮನ್ನಣೆಗೆ ಬೆಲೆ ಕೊಟ್ಟು ಕರ್ತವ್ಯಕ್ಕೆ ಹಾಜರಾದ ಎಲ್ಲ ಚಾಲಕ ಹಸಗೂ ನಿರ್ವಾಹಕರಿಗೆ ಅಭಿನಂದಿಸುವುದಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್.ಫುಲೇಕರ್ ಪ್ರಕಟಣೆಗೆ ತಿಳಿಸಿದ್ದಾರೆ.