ಸಾರಿಗೆ ನೌಕರ ಕುಟುಂಬದವರು ತಟ್ಟೆ-ಲೋಟ ಬಡಿದು ಪ್ರತಿಭಟನೆ..

ತುಮಕೂರು: ತುರುವೇಕೆರೆ ಪಟ್ಟಣದಲ್ಲಿ ಮುಷ್ಕರ ನಿರತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕುಟುಂಬದವರು ನಡೆಸಿದ ತಟ್ಟೆ-ಲೋಟ ಬಡಿದು ನ‌ಡೆಸಿದ ಪ್ರತಿಭಟನೆಯನ್ನು ಬೆಂಬಲಿಸಿದ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಸರ್ಕಾರದ ವಿರುದ್ಧ ಹರಿಹಾಯ್ದು ಸಾರಿಗೆ ನೌಕರರಿಗೆ 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿದರು.