ಸಾರಿಗೆ ಬಸ್, ಬೈಕ್ ಡಿಕ್ಕಿ: ದಂಪತಿ ಸ್ಥಳದಲ್ಲಿಯೇ ಸಾವು

ವಿಜಯಪುರ: ಜೂ.17:ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ತಿಕೋಟಾ ರಸ್ತೆಯ ರತ್ನಾಪುರ ಕ್ರಾಸ್ ಬಳಿ ನಡೆದಿದೆ.

ವಿಜಯಪುರ ನಗರ ನಿವಾಸಿ ಶಾಹೀನಾ ವಾಲೀಕಾರ ಹಾಗೂ ಸಲೀಂ ವಾಲೀಕಾರ ಮೃತಪಟ್ಟಿರುವ ದಂಪತಿ.

ರತ್ನಾಪುರದಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಿಕೋಟಾ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.