ಸಾರಿಗೆ ಮುಷ್ಕರಕ್ಕೆ ಬೆಂಬಲ : ನೀರಲಕೇರಿ

ಹುಬ್ಬಳ್ಳಿ, ಏ 6: ಸಾರಿಗೆ ಸಂಸ್ಥೆ ನೌಕರರ ಆರನೇ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರೆ ನೀಡಿರುವ ಸಾರಿಗೆ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಬೆಂಬಲ ನೀಡಲಾಗುವುದು ಎಂದು ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಮುಖಂಡ ಪಿ.ಎಚ್. ನೀರಲಕೆರಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆಯಿಂದಲೇ ಸಾರಿಗೆ ಬಸ್‍ಗಳು ಬಂದ್ ಆಗಲಿವೆ. ಎಸ್ಮಾ ಜಾರಿ ಮಾಡಿದರು ಕೂಡ ಹೆದರುವುದಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆಗೆ ನಾವು ಸಿದ್ದರಾಗಿದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕುಟುಂಬ ಸಮೇತ ಜೈಲ್ ಭರೋ ಚಳುವಳಿ ಹಮ್ಮಿಕೊಂಡಿದ್ದೇವೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಹಿಂದೆ ಸರಿಯೊಲ್ಲ. ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದ ಸರ್ಕಾರ ನಮ್ಮ ಬೇಡಿಕೆಗಳನ್ನು ಇಲ್ಲಿಯವರೆಗೆ ಈಡೇರಿಸಿಲ್ಲ ಎಂದು ನೀರಲಕೇರಿ ಆಕ್ರೋಶ ವ್ಯಕ್ತಪಡಿಸಿದರು.