ಸಾರಿಗೆ ಮುಷ್ಕರದ ವೇಳೆ‌ ಬಸ್ ಗೆ ಹಾನಿ: 3 ಸಿಬ್ಬಂದಿ ವಿರುದ್ದ ಕ್ರಮ: ಬಿಎಂಟಿಸಿ

ಬೆಂಗಳೂರು,ಡಿ.28- ಸಾರಿಗೆ ನೌಕರರ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ‌ ಮೇಲೆ ದೈಹಿಕ ಹಲ್ಲೆ ಮಾಡಿ ,ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಎಫ್ ಐಆರ್ ದಾಖಲಾದ 3 ಸಿಬ್ಬಂದಿಯ ವಿರುದ್ದ ಮಾತ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.

ಮೂವರ ಸಿಬ್ಬಂದಿಗಳ ಮೇಲೆ‌ ಮಾತ್ರ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ.ಇನ್ನಾವುದೆ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಸಾರಿಗೆ ಇಲಾಖೆಯಲ್ಲಿ ಮುಷ್ಕರದಲ್ಲಿ ಪಾಲ್ಗೊಂಡ 200 ನೌಕರರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ

ಬಿಎಂಟಿಸಿ ವ್ಯಾಪ್ತಿಯಲ್ಲಿ ಮುಷ್ಕರದ ಸಮಯದಲ್ಲಿ ಕಾರ್ಯನಿರತ ಸಿಬ್ಬಂದಿಗಳ ಮೇಲೆ ಹಲ್ಲೆಮಾಡಿರುವ ಒಟ್ಟು 3 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ವೇತನ‌ ಕಡಿತವಿಲ್ಲ:

ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ ಎಂದು ತಿಳಿಸಲಾಗಿದೆ.

ಸಂಸ್ಥೆ ಮತ್ತು ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮತೆಗೆದುಕೊಳ್ಳಲಾಗುವುದು.
ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.