ಸಾರ್ವಜನಿಕರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದ ಸಿಆರ್‍ಪಿಎಫ್ ಪಡೆ

ಚಿತ್ರದುರ್ಗ ಏ. 7;ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅವರಲ್ಲಿ ಭದ್ರತೆಯ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಕೇಂದ್ರ ಮೀಸಲು ಪಡೆ ಯೋಧರು ಗುರುವಾರ ಚಿತ್ರದುರ್ಗ ನಗರದ ವಿವಿಧ ಪ್ರದೇಶಗಳಲ್ಲಿ ಅಭಯ ಪಥಸಂಚಲನ ನಡೆಸಿ, ಸಾರ್ವಜನಿಕ ವಲಯದಲ್ಲಿ ಸಂಚಲನವನ್ನುಂಟು ಮಾಡಿದರು.ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ನಿರ್ಭೀತಿಯಿಂದ ಮತ ಚಲಾವಣೆ ಮಾಡಬೇಕು, ಪುಂಡ-ಪೋಕರಿಗಳು ತಮ್ಮ ಯಾವುದೇ ದುಷ್ಕøತ್ಯ ನಡೆಸಲು ಸಾಧ್ಯವಿಲ್ಲ.  ಸಾರ್ವಜನಿಕರ ರಕ್ಷಣೆಗೆ ನಾವಿದ್ದೇವೆ ಎನ್ನುವಂತೆ ಸಿಆರ್‍ಪಿಎಫ್ ತಂಡವು, ನಗರದ ಏಕನಾಥೇಶ್ವರಿ ಪಾದಗುಡಿ ಆವರಣದಿಂದ ಪ್ರಾರಂಭಿಸಿ, ನಗರದ ವಿವಿಧ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿದರು.  ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಅವರು ಪಥಸಂಚಲನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಅಲ್ಲದೆ ಖುದ್ದು ಅಧಿಕಾರಿಗಳು ಪಥಸಂಚಲನದಲ್ಲಿ ಭಾಗವಹಿಸಿ, ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸುವುದರ ಜೊತೆಗೆ ಭದ್ರತೆಯ ಭಾವನೆ ಮೂಡುವಂತೆ ಮಾಡಿದರು.