ಸಾರ್ವಜನಿಕರು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಬೇಕು:ಜಿಲ್ಲಾಧಿಕಾರಿ ಗೊವಿಂದರೆಡ್ಡಿ

ಬೀದರ ನ.09: ಭಾರತ ಚುನಾವಣಾ ಆಯೋಗ ನವದೆಹಲಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಅವರ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ 2023ರ ಪ್ರಯುಕ್ತ ಬೀದರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಗೋವಿಂದ ರೆಡ್ಡಿ ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023ರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈಗಾಗಲೇ ನೇಮಕಗೊಂಡ ಮತಗಟ್ಟೆ ಮಟ್ಟದ ಅಧಿಕಾರಿಗಳು ನವೆಂಬರ್.9 ರಿಂದ ಡಿಸೆಂಬರ್.8 ರವರೆಗೆ ಮನೆ ಮನೆ ಸಮೀಕ್ಷೆ ನಡೆಸಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದ ಸಮಯದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಖಾಯಂ ವಿಳಾಸದಲ್ಲಿ ಉಪಸ್ಥಿತರಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ನಮೂನೆ-6 ರ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನಮುನೆ-7ರ ಮೂಲಕ ಮರಣ, ವಲಸೆ ಮತ್ತು ಇತರೆ ಕಾರಣಗಳಿಂದ ಮತದಾರರ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮತ್ತು ನಮೂನೆ-8ರ ಮೂಲಕ ಮತದಾರರ ಹೆಸರು ತಿದ್ದುಪಡೆ ಮಾಡುವುದು ಸದುಪಯೋಗ ಪಡೆದುಕೊಂಡು ದೋಷಮುಕ್ತ ಮತದಾರರ ಪಟ್ಟಿ ತೈಯ್ಯಾರಿಸುವಲ್ಲಿ ಜಿಲ್ಲೆಯ ಮತದಾರರು ಸಹಕರಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಯಶಸ್ವಿಗೆ ಬೀದರ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಗೋವಿಂದ ರೆಡ್ಡಿ ಹೇಳಿದರು.

ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಜಾಗೃತಿ ಕುರಿತು ನೋಂದಾಯಿಸಿ ನೋಂದಾಯಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಾಯಿಸಿ, 18 ವರ್ಷ ಪೂರೈಯಿಸಿದ ಎಲ್ಲಾ ಯುವಕ ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಪರಿಶೀಲಿಸಿ ಪರಿಶೀಲಿಸಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಎಂಬ ಘೋಷ ವಾಕ್ಯಗಳೊಂದಿಗೆ ಘೋಷಣೆಗಳನ್ನು ಕುಗುತ್ತಾ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮವು ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ ಬಾಬು, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ರಾಜ್ಯ ಮಟ್ಟದ ಚುನಾವಣಾ ತರಬೇತಿದಾರರಾದ ಡಾ.ಗೌತಮ್ ಅರಳಿ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗು ವಿವಿಎಮ್.ವಿವಿಪ್ಯಾಟ್ ಜಿಲ್ಲಾ ನೋಡಲ್ ಅಧಿಕಾರಿ ಅಭಯಕುಮಾರ ಸೇರಿದಂತೆ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.