ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರದ ನೆರವು

ಸಾಸ್ವೇಹಳ್ಳಿ.ಮಾ.೨೧; ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮಕ್ಕೆ ರಾಜ್ಯದಾಧ್ಯಂತ ಉತ್ತಮ ಸ್ಪಂದನೆ ದೊರೆತಿದ್ದು,ಆಡಳಿತ ಸರಳೀಕರಣ ಮಾಡುವ ನಿಟ್ಟಿನಲ್ಲಿ ಇದು ಅನುಕೂಲವಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿದರು.ತಾಲೂಕಿನ ರಾಂಪುರ ಗ್ರಾಮದಲ್ಲಿ  ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ನೀಡಲಿರುವ ವಿವಿಧ ಸಾಮಾಜಿಕ ಭದ್ರತೆಯ ಸೌಲಭ್ಯಗಳು ಅರ್ಹರ ಮನೆ ಬಾಗಿಲಿಗೆ ತಲುಪಲು ಇದು ಅನುಕೂಲವಾಗಲಿದೆ ಎಂದರು.ಜನರು ಕಚೇರಿಗಳಿಗೆ ಅಲೆಯುವ ಬದಲು ಅಧಿಕಾರಿಗಳೇ ಜನರ ಮನೆ ಬಾಗಿಲು ಬಂದು ಅವರ ಕೆಲಸ ಮಾಡಲು ಈ ಕಾರ್ಯಕ್ರಮ ಅನುಕೂಲವಾಗಿದೆ ಎಂದರು.ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಜನಸ್ಪಂದನ ಎಂಬ ವಿನೂತನ ಕಾರ್ಯಕ್ರಮ ಜಾರಿ ಮಾಡಿದ್ದರು. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ 50 ಕಡೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದು ಸಾವಿರಾರು ಜನರಿಗೆ ಈ ಮೂಲಕ ಹಕ್ಕು ಪತ್ರ ನೀಡಲಾಗಿತ್ತು ಎಂದರು.ಅದೇ ರೀತಿ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವರು ಜಿಲ್ಲಾಧಿಕಾರ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮ ಜಾರಿ ಮಾಡಿದ್ದು ಜನರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ದೊರೆಯಲಿದೆ ಎಂದರು.ಎಷ್ಟೇ ರಾಜಕಾರಣಿಗಳು, ಅಧಿಕಾರಿಗಳು ಕೆಲ ಗ್ರಾಮಗಳನ್ನು ನೋಡಿಯೇ ಇರುವುದಿಲ್ಲಾ ಚುನಾವಣೆ ಸಂಧರ್ಭದಲ್ಲಿ ಮಾತ್ರ ಮತ ಕೇಳಲು ಹೋಗಿ ಬರುತ್ತಾರೆ. ಆದರೇ ಈ ರೀತಿ ಕಾರ್ಯಕ್ರಮ ಮಾಡುವುದರಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂಧಿಸಲು ಇದು ಅನುಕೂಲವಾಗಿದೆ ಎಂದರು.ರಾಜ್ಯದಾದ್ಯಂತ ಎರಡನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಇದಾಗಿದ್ದು ಇದಕ್ಕೆ ರಾಜ್ಯದಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಅಧಿಕಾರಿಗಳು ಕೇಲವ ಇದನ್ನು ಒಂದು ದಿನಕ್ಕೆ ಮಾತ್ರ ಸೀಮಿತ ಮಾಡದೇ ಪ್ರತಿದಿನ ಸಾರ್ವಜನರಿಕೆ ಸಮಸ್ಯೆಗಳಿಗೆ ಸ್ಪಂಧಿಸಿ ಅವರ ಕೆಲಸವನ್ನು ಮಾಡಿಕೊಡುವ ಮನೋಭಾವನೆ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಸಾಮಾಜಿಕ ಭದ್ರತಾ ಯೋಜನೆಯಡು 15 ಜನರಿಗೆ ವೃದ್ದಾಪ್ಯ ವೇತನ, ಸಂದ್ಯಾ ಸುರಕ್ಷಾ ಯೋಜನೆಯಡಿ ಒಬ್ಬರಿಗೆ, ವಿಧವಾ ವೇತನ 3 ಜನರಿಗೆ,ಅಂಗವಿಕಲ ವೇತನ 2, ಮನಸ್ವಿನಿ 1, ಪೌತಿ ವಾರಸು ಅರ್ಜಿ 6, ಮೂರು ಮತ್ತು ಒಂಬತ್ತು ಪ್ರಕರಣಗಳು 3, ಪೋಡಿ ಮುಕ್ತ ಗ್ರಾಮ 2 ಒಟ್ಟು 33 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.ಈ ಸಂದರ್ಭ ತಹಶೀಲ್ದಾರ್ ಬಸವರಾಜ್ ಕೋಟೂರ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿರಶೇಖರಪ್ಪ, ಗ್ರಾಮಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
Attachments area