ಸಂಜೆವಾಣಿ ವಾರ್ತೆ
ಚಿತ್ರದುರ್ಗ ಸೆ. ೨೬; ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳ ಆಶಯದಂತೆ ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು ನಗರದ ಹುಳಿಯಾರು ರಸ್ತೆಯ ತಾಹಾ ಪ್ಯಾಲೇಸ್ ನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ತಿಂಗಳನ್ನು ಪೂರೈಸಿದೆ. ಆಡಳಿತ ಚುರುಕುಗೊಳಿಸಲು ಜನರ ಸಂಕಷ್ಟಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಚಿತ್ರದುರ್ಗ ತಾಲೂಕಿನಲ್ಲಿ 800 ಚಳ್ಳಕೆರೆ-900 ಹಿರಿಯೂರು-950 ಹೊಳಲ್ಕೆರೆ- 1285, ಹೊಸದುರ್ಗ -1441, ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 1530 ಪೌತಿ ಖಾತೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 6500 ಕ್ಕೂ ಹೆಚ್ಚು ಪೌತಿ ಖಾತೆಗಳು ಆಗಬೇಕಿದೆ. ಅಕ್ಟೋಬರ್ 31 ರ ಒಳಗೆ ಈ ಪೌತಿ ಖಾತೆಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ವತಿಯಿಂದ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕಾಲಮಿತಿಯೊಳಗೆ ಈ ಪೌತಿ ಖಾತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು. ಯಾವುದೇ ಸಾರ್ವಜನಿಕರು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ತಹಶೀಲ್ದಾರ್ ಕಚೇರಿಗಳಿಗೆ ಅಲೆದಾಡಬಾರದು. ಜನರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು ತಲುಪಿಸಲು, ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡ್ಯೊಯಲು ಪ್ರಾಮಾಣಿಕವಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸಚಿವ ಡಿ ಸುಧಾಕರ್ ಹೇಳಿದರು.ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್. ಜೆ ಮಾತನಾಡಿ, ಸರ್ಕಾರ ಯೋಜನೆಗಳು ಅರ್ಹರಿಗೆ ಸಮರ್ಪಕವಾಗಿ ತಲುಪಿದಾಗ ಮಾತ್ರ ಅವು ಯಶಸ್ವಿಯಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಹಲವು ಮಹತ್ವಾಕಾಂಕ್ಷೆ ಯೋಜನೆಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ, ಜನ ಸಾಮಾನ್ಯರನ್ನು ಅಲೆದಾಡಿಸದೇ ತಲುಪಿಸಬೇಕು. ಮನೆಬಾಗಿಲಿಗೆ ಬಂದು ಸಮಸ್ಯೆಗಳನ್ನು ಕೇಳುವ ಮೂಲಕ, ಆ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಲು ಜಿಲ್ಲೆಯ ಅಧಿಕಾರಿಗಳು ಶ್ರಮಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ 15 ದಿನಕ್ಕೊಮ್ಮೆ ಒಂದು ತಾಲ್ಲೂಕು ಆಯ್ಕೆ ಮಾಡಿ, ಆ ತಾಲ್ಲೂಕಿನ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರೂ ಸೇರಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದರು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಜನಸ್ಪಂದನ-iPಉಖS ಪೆÇೀರ್ಟಲ್ ನಲ್ಲಿ ಅರ್ಜಿ, ದೂರುಗಳನ್ನು ಸ್ವೀಕರಿಸಿ, ಇಲಾಖಾವಾರು ವಿಂಗಡಣೆ ಮಾಡಿ, ಅರ್ಜಿಯ ಸ್ಥಿತಿಗತಿಯ ಬಗ್ಗೆ ತಿಳಿಯಲು ಇದರಿಂದ ಅನುಕೂಲವಾಗಲಿದೆ. ಈ ಅರ್ಜಿಯನ್ನು ಅಧಿಕಾರಿಗಳು ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು. ಅರ್ಜಿ ಸಲ್ಲಿಸುವವರ ಮೊಬೈಲ್‍ಗೆ ಅರ್ಜಿ ಸ್ವೀಕೃತಿಯ ಬಗ್ಗೆ ಸಂದೇಶ ಬರುವ ರೀತಿ ವ್ಯವಸ್ಥೆ ಒದಗಿಸಲಾಗಿದೆ. ಹಾಗಾಗಿ ಜನಸಾಮಾನ್ಯರು ಜನತಾ ದರ್ಶನ ಕಾರ್ಯಕ್ರಮವನ್ನು ಉತ್ತಮ ರೀತಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಕಾನೂನು ರೀತಿಯಲ್ಲಿ ಕ್ರಮವಹಿಸಲು ಬದ್ಧರಾಗಿದ್ದೇವೆ. ಜನತಾ ದರ್ಶನ ಕಾರ್ಯಕ್ರಮಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅರ್ಜಿಗಳನ್ನು ಆಯಾ ಇಲಾಖಾ ಮುಖ್ಯಸ್ಥರು ನಿಗದಿತ ಸಮಯದೊಳಗೆ ಇತ್ಯರ್ಥಪಡಿಸಲು ಎಲ್ಲ ರೀತಿಯ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ರಂಗನಾಥ, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಹಿರಿಯೂರು ತಹಶಿಲ್ದಾರ್ ರಾಜೇಶ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ಹಿರಿಯೂರು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಉಪಸ್ಥಿತರಿದ್ದರು.