ಚಿತ್ರದುರ್ಗ.ಜೂ.೨೧; ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಆಸ್ತಿ, ಖಾತೆ, ವಿವಾಹ ನೋಂದಣಿ ಸೇರಿದಂತೆ ವಿವಿಧ ಕಾರ್ಯನಿಮಿತ್ತ ಉಪ ನೋಂದಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಉಪ ನೋಂದಣಿ ಕಚೇರಿಯಲ್ಲಿನ ಇಲಾಖೆಯ ಸರ್ವರ್ ಸಮಸ್ಯೆ, ಕುಂದು ಕೊರತೆ ಹಾಗೂ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಚಿರ್ಚಿಸಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮವಹಿಸಲಾಗುವುದು ಎಂದು ತಿಳಿಸಿದರು.ವಿವಿಧ ಕಾರಣಗಳಿಂದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಹೊಳಲ್ಕೆರೆ ಉಪ ನೋಂದಣಿ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು. ನಂತರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಹೊಸದುರ್ಗ ತಹಶೀಲ್ದಾರರ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.