
ಬೀದರ, ಸೆ.10: ಜಿಲ್ಲೆಯ ಸಾರ್ವಜನಿಕರ ಹಾಗೂ ಗಣೇಶ ಮಹಾಮಂಡಳಿಯ ಸಹಕಾರದೊಂದಿಗೆ ಮುಂಬರುವ ಗಣೇಶ್ ಚತುರ್ಥಿಯನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಗಣೇಶ್ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಬಿದಿ ಬದಿಯ ದೀಪಗಳು ಕೆಟ್ಟಿದರೆ ಅವುಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ಸ್ವಚ್ಛತೆ ಕಾಪಾಡಲು ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೆÇಲೀಸ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, ಗಣೇಶ ಉತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೆÇಲೀಸ್ ಬಂದೊಬಸ್ತ ಕೈಗೊಳ್ಳಲಾಗುವುದು. ಶಾಂತಿ ಹಾಗೂ ಸೌಹಾರ್ದತೆಯಿಂದ ಗಣೇಶ್ ಚತುರ್ಥಿ ಆಚರಣೆಗೆ ಪೆÇಲೀಸ್ ಇಲಾಖೆಗೆ ಸಾರ್ವಜಿನಿಕರ ಹಾಗೂ ಗಣೇಶ್ ಮಹಾಮಂಡಳಿಯ ಸಹಾಕಾರವು ಅಗತ್ಯವಾಗಿದೆ ಎಂದರು.
ಗಣೇಶ್ ಮಹಾಮಂಡಳಿಯ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ಮಾತನಾಡಿ, ಶಾಂತಿಯುತವಾಗಿ ಗಣೇಶ್ ಚತುರ್ಥಿ ಆಚರಿಸಲು ಗಣೇಶ್ ಮಹಾಮಂಡಳಿಯ ವತಿಯಿಂದ ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಲಾಗುವು ಎಲ್ಲರೂ ಸೇರಿ ಗಣೇಶ್ ಉತ್ಸವ ಅದ್ಧೂರಿಯಾಗಿ ಆಚರಿಸೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೀಲ್ಪಾ.ಎಂ, ಗಣೇಶ್ ಮಹಾಮಂಡಳಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಗಾದಗಿ, ಗಣೇಶ್ ಮಹಾಮಂಡಳಿಯ ಉಪಾಧ್ಯಕ್ಷ ಈಶ್ವರಸಿಂಗ ಠಾಕೂರ್, ಗಣೇಶ್ ಮಹಾಮಂಡಳಿ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.