ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಚಿತ್ರದುರ್ಗ.ಜೂ.೧೭: ಇದೇ ಜೂನ್ 21ರಂದು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರ ಸಹಭಾಗಿತ್ವದಲ್ಲಿ “9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 7 ರಿಂದ 7.45 ರವರೆಗೆ ಸಾರ್ವಜನಿಕರು, ಯೋಗಾಸ್ತಕರು, ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ. ಇದರಲ್ಲಿ ಶಾಲಾ-ಕಾಲೇಜು, ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೂವಂತೆ ಅಧಿಕಾರಿಗಳು ಹಾಗೂ ಯೋಗ ಸಂಸ್ಥೆಗಳ ಮುಖ್ಯಸ್ಥರು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.