ಸಾರ್ವಜನಿಕ ಆಸ್ಪತ್ರೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು ಸಂತಸ ತಂದಿದೆ : ಲಕ್ಷ್ಮಣ ಸವದಿ

ಅಥಣಿ :ಜೂ.19: ತಾಲೂಕಾ ಸಾರ್ವಜನಿಕ ಆಸ್ಪತ್ರೆಯು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಕೊಡುವ ರಾಷ್ಟ್ರೀಯ ಪ್ರಶಂಸನಾ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತೋಷದ ವಿಚಾರ. ಬಡ ರೋಗಿಗಳಿಗೆ ಉತ್ತಮ ಸೇವೆ ಒದಗಿಸುತ್ತಿರುವ ವೈದ್ಯರನ್ನು ಮತ್ತು ಸಿಬ್ಬಂದಿಯನ್ನು ತಾಲೂಕಿನ ಜನತೆಯ ಪರವಾಗಿ ಅಭಿನಂದಿಸುವೆ. ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು,
ಸಾರ್ವಜನಿಕ ಆಸ್ಪತ್ರೆಯು ಕೇವಲ ಪಟ್ಟಣದಲ್ಲಿ ಅಷ್ಟೇ ಅಲ್ಲದೆ ತಾಲೂಕಿನ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಿದೆ. ತಾಲೂಕಿನ ಬಡ ರೋಗಿಗಳಿಗೆ ಆರೋಗ್ಯ ಸೇವೆಗಳು ಸುಲಭವಾಗಿ ದೊರಕಬೇಕು ಈ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು, ಆಕ್ಸಿಜನ್ ಘಟಕಗಳನ್ನು ಮತ್ತು ???ಂಬುಲೆನ್ಸ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸುವಲ್ಲಿ ನನ್ನ ಅಳಿಲು ಸೇವೆ ಮಾಡಿದ್ದೆ?ನೆ. ಮುಂದಿನ ದಿನಮಾನಗಳಲ್ಲಿ ಇನ್ನೆರಡು ಡಯಾಲಿಸಿಸ್ ಯಂತ್ರಗಳ ಸ್ಥಾಪನೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ ಸೇರಿದಂತೆ ಇನ್ನಷ್ಟುಆರೋಗ್ಯ ಸೇವೆಗಳು ಬಡಜನತೆಗೆ ಸುಲಭವಾಗಿ ಸಿಗುವ ನಿಟ್ಟಿನಲ್ಲಿ ಸುಧಾರಣೆ ಕೈಕೊಳ್ಳಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು,