ಸಾರ್ವಜನಿಕ ಗ್ರಂಥಾಲಯಕ್ಕೆ ನಿರ್ದೇಶಕ ಭೇಟಿ 


ಸಂಜೆವಾಣಿ ವಾರ್ತೆ
ಕೊಪ್ಪಳ ಮಾ.12: ನಗರದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಿಲ್ಲಾ ಕೇಂದ್ರ ಗ್ರಂಥಾಲಯಗಳಾದ ಸಾಹಿತ್ಯ ಭವನ ಹಿಂಭಾಗದ ಮತ್ತು ಗಣೇಶನಗರ ಗ್ರಂಥಾಲಯಕ್ಕೆ ಪದ್ಮಶ್ರೀ ಪ್ರಶಸ್ತಿ ಪುಸರಸ್ಕೃತ ಸಾಹಿತಿಗಳಾದ ಡಾ.ದೊಡ್ಡರಂಗೇಗೌಡರು ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಎಸ್.ಹೊಸಮನಿ ಭೇಟಿ ನೀಡಿದರು.
 ವಿದ್ಯಾರ್ಥಿಗಳ ಕುರಿತು ಮಾತನಾಡಿದ ದೊಡ್ಡರಂಗೇಗೌಡರು ನೀವೆಲ್ಲಾ ಹೆಚ್ಚು ಹೆಚ್ಚು ಓದಬೇಕು, ನಿಮ್ಮ ಕನಸುಗಳನ್ನು ನನಸು ಮಾಡಲು ಪುಸ್ತಕಳು ಇವೆ ಅವುಗಳನ್ನು ಉಪಯೋಗಿಸಿಕೊಳ್ಳಿ. ಮುಂದಿನ ದಿನಗಳಲ್ಲಿ ನೀವು ಓದಿ ಕನ್ನಡ ನಾಡಿಗೆ ಸಂಪನ್ಮೂಲ ವ್ಯಕ್ತಿಗಳಾಗುವಂತೆ ಬದುಕಿ ಬಾಳಿ ಎಂದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ಮಾತನಾಡಿ, ನೀವು ಗ್ರಂಥಾಲಯವನ್ನು ಸದುಪಯೋಗಪಡಿಸಿಕೊಳ್ಳಿ, ನಮ್ಮ ಗ್ರಂಥಾಲಯದಲ್ಲಿ ಓದಿ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಲಿ.
ಇದೇ ಸಮಯದಲ್ಲಿ ತಾಲೂಕ ಕ.ಸಾ.ಪ ಅಧ್ಯಕ್ಷ ರಾಮಚಂದ್ರ ಗೊಂಡಬಾಳ ಅವರು ಇಬ್ಬರು ಮಹನೀಯರಿಗೆ ಸನ್ಮಾನಿಸಿದರು.
ಕೊಪ್ಪಳ ಜಿಲ್ಲಾ ಕೇಂದ್ರ ಗ್ರಂಥಾಲಯಲದ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ವಟಪರವಿ, ಹೊಸಪೇಟೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ವಿನೋದರಾಜ, ಸಿಬ್ಬಂದಿಗಳಾದ ನರಸಿಂಹಮೂರ್ತಿ, ನಾಗರಾಜನಾಯಕ ಡೊಳ್ಳಿನ, ಶಿವನಗೌಡ ಪಾಟೀಲ, ವಿಜಯಲಕ್ಷ್ಮೀ ವಡ್ಡಟ್ಟಿ, ಈಶ್ವರ ಹಾಗೂ ಓದುಗರು, ವಿದ್ಯಾರ್ಥಿಗಳು ಹಾಜರಿದ್ದರು.