ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ: 109 ಪ್ರಕರಣ ದಾಖಲು

ಕಲಬುರಗಿ,ಜೂ.13-ನಗರದ ವಿವಿಧ ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಕಾನೂನು ಬಾಹಿರ ಕೃತ್ಯಗಳನ್ನು ಎಸಗಿರುವ ವ್ಯಕ್ತಿಗಳ ವಿರುದ್ಧ ಒಟ್ಟು 109 ಪ್ರಕರಣಗಳನ್ನು ಕರ್ನಾಟಕ ಪೆÇಲೀಸ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕರು ಇನ್ನೂ ಮುಂದೆ ಈ ತರಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.