ಕಲಬುರಗಿ:ಜು.10: ಸಾರ್ವಜನಿಕ ಸ್ಥಳಗಳಲ್ಲಿ ಸರಕಾರಿ ಕಚೇರಿಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕೋಟ್ಪಾ ಕಾಯ್ದೆ 2003 ರ ಸೆಕ್ಷನ್ 04 ರಡೆಯಲ್ಲಿ ಧೂಮಪಾನ ಮಾಡುವುದನ್ನು ಸಂಪೂರ್ಣ ನಿಷೇಧಿಸಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ರಾಚಪ್ಪ ಅವರು ಹೇಳಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಕೊಠಡಿಯಲ್ಲಿ ಕೋಟ್ಪಾ 2003- ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದಡಿಯಲ್ಲಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಶೋಕೇಸ್‍ಗಳ ಮೂಲಕ ಪ್ರದರ್ಶನ್ ಮಾಡುವಂತಿಲ್ಲ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಬೋರ್ಡ್, ಬಿತ್ತಿ , ಪತ್ರ, ಎಲ್.ಸಿ.ಡಿ., ಟಿ.ವಿ ಬರಹಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಸ್ಪಷ್ಟಪಡಿಸಿದರು. ಅದೇ ರೀತಿಯಾಗಿ ದಾಳಿಗಳನ್ನು ಮಾಡಲು ಅಧಿಕಾರಿಗಳು ತಂಡಗಳನ್ನು ರಚಿಸಿ ದಾಳಿ ಮಾಡಿ ಕಾನೂನಿನ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜಿಗಳಲ್ಲಿ ಸೆಕ್ಷನ್-4 & ಸೆಕ್ಷನ್-6 ಗೆ ಸಂಬಂಧಿಸಿದ ನಾಮಫಲಕಗಳನ್ನು ಅಳವಡಿಸಿ ತಂಬಾಕು ಮುಕ್ತ ವಲಯವನ್ನಾಗಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚಿಸಿದರು.
ಕಲಬುರಗಿ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು, ಶಿಕ್ಷಣ ಸಂಸ್ಥೆಗಳು ತಂಬಾಕು ಮುಕ್ತ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ತಂಬಾಕು ನಿಯಂತ್ರಣಾಧಿಕಾರಿ ಸುರೇಶ ಮೇಕಿನ್ ಮಾತನಾಡಿ, ಅನೇಕ ಜಿಲ್ಲೆಯ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಫಲಕಗಳನ್ನು ಹಾಕಿ ತಂಬಾಕು ನಿಯಂತ್ರಣದ ಬಗ್ಗೆ ಮಕ್ಕಳಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದೇವೆ ಎಂದರು.
ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಂಬಾಕು ಮಾರಾಟ ಮಾಡುವ ಮಳಿಗೆಗಳ ಮೇಲೆ ದಾಳಿ ಕೋಟ್ಪಾ -2003ರ ಕಾಯ್ದೆಯ ಅನ್ವಯ ದಾಳಿ ಮಾಡಬೇಕೆಂದರು. ತಾಲೂಕಾ ಮಟ್ಟದ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆಗಳು ನಡೆಸಬೇಕೆಂದರು.
ಭಾರತದಲ್ಲಿ 20 ಲಕ್ಷ ಜನಗಳು ಸಾವು ಅಪ್ಪುತ್ತಿದ್ದಾರೆ ಇದನ್ನು ಹೋಗಲಾಡಿಸಬೇಕೆಂದು ತಂಬಾಕು ಮುಕ್ತ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಈ ವಿದ್ಯಾ ಸಂಸ್ಥೆಗಳ ಆವರಣದಿಂದ 100 ಯಾರ್ಡ್(ಗಜ) ಅಂತರದಲ್ಲಿ ಸಿಗರೇಟು ಅಥವಾ ಇತರೆ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಉಲ್ಲಂಘನೆಯ ಶಿಕ್ಷಾರ್ಹ ಅಪರಾಧವಾಗಿದ್ದು. ಕೋಟ್ಪಾ ಕಾಯ್ದೆಯಡಿ ರೂ. 200/- ರವರೆಗೆ ದಂಢ ವಿಧಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಬೆಂಗಳೂರು ರಾಜ್ಯ ತಂಬಾಕು ನಿಯಂತ್ರಣ ಕೋಶ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ,ಡಾ.ರಾಜಶೇಖರ ಮಾಲಿ, ತಂಬಾಕು ನಿಯಂತ್ರಣದ ಸಮಾಜ ಕಾರ್ಯಕರ್ತೆ ಆರತಿ ಧನುಶ್ರೀ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.