ಸಾರ್ವಜನಿಕ ಸ್ವತ್ತು ಮಾರಾಟ: ಸರ್ಕಾರದ ವಿರುದ್ದ ಕೈ ವಾಗ್ದಾಳಿ

ಬೆಂಗಳೂರು,ಮಾ.೩೧- ಸಾರ್ವಜನಿಕ ಸ್ವತ್ತುಗಳನ್ನು ಮಾರುವ ಚಾಳಿಯನ್ನು ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವೂ ಮುಂದುವರೆಸಿದೆ”ಎಂದು ರಾಜ್ಯ ಕಾಂಗ್ರೆಸ್ ಪಕ್ಷ ವಾಗ್ದಾಳಿ ನಡೆಸಿದೆ.

ಬಿಜೆಪಿ ಪಕ್ಷದ ಆಡಳಿತದಲ್ಲಿ ಸಾರ್ವಜನಿಕರ ಹಣಕ್ಕೆ ಪಾರದರ್ಶಕತೆ ಇಲ್ಲವಾಗಿದೆ. ಒಂದೆಡೆ ಹಣಕ್ಕಾಗಿ ಕೇಂದ್ರದ ಸಾರ್ವಜನಿಕ ಸ್ವತ್ತುಗಳನ್ನು ಮಾರುವ ಚಾಳಿಯನ್ನು ರಾಜ್ಯ ಸರ್ಕಾರವೂ ಮುಂದುವರೆಸಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ.

ಇನ್ನೊಂದೆಡೆ ೭೧೦೦ ಕೋಟಿ ಅಧಿಕಾರಿಗಳ ಖಾತೆಯಲ್ಲಿ ಕೊಳೆಯುತ್ತಿದೆ ಅಭಿವೃದ್ಧಿಗೆ ಹಣವಿಲ್ಲ ಎನ್ನುವ ಸರ್ಕಾರ ಈ ಹಣವನ್ನು ಬಳಸದೆ ಬಿಟ್ಟಿದ್ದೇಕೆ? ಎಂದು ಪ್ರಶ್ನಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಮಾಡುವ ಕೆಟ್ಟ ಸಂಪ್ರದಾಯವನ್ನು ಮುಂದುವರಿಸಿದೆ ಇದು ಒಳ್ಳೆಯ ಲಕ್ಷಣವಲ್ಲ ಎಂದು ಕಾಂಗ್ರೆಸ್ ದೂರಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗಾಗಲೇ ದೇಶದ ಅನೇಕ ಭಾಗಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಖಾಸಗಿಯವರಿಗೆ ಮಾಡಿದೆ. ಇದೀಗ ಅದೇ ರೀತಿಯ ಚಾಳಿಯನ್ನು ರಾಜ್ಯ ಬಿಜೆಪಿ ಸರ್ಕಾರವು ಮುಂದುವರಿಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದೆ.