ಸಾಲದ ಖಾತೆಗೆ ಜಮಾ ಮಾಡದಂತೆ ಸೂಚನೆ


ಧಾರವಾಡ, ಮೇ.19: ಸರಕಾರವು ಯಾವುದೇ ಪೆÇ್ರೀತ್ಸಾಹ ಧನ ಅಥವಾ ಸಹಾಯ ಧನವನ್ನು ರೈತರ ಹಾಗೂ ಸಾರ್ವಜನಿಕರ ಜೀವನೋಪಾಯಕ್ಕಾಗಿ ಬಿಡುಗಡೆ ಮಾಡುತ್ತದೆ. ಆದ್ದರಿಂದ ಬರ ಪರಿಹಾರದ ಹಣ ಸೇರಿದಂತೆ ವೃದ್ಯಾಪ್ಯ ವೇತನ, ಅಂಗವಿಕಲರ ಮಾಶಾಸನ, ನರೆಗಾ ಕೂಲಿ ಹಾಗೂ ಇತರೆ ಸರಕಾರದಿಂದ ಬಿಡುಗಡೆ ಆಗಿರುವಂತಹ ಪೆÇ್ರೀತ್ಸಾಹ ಧನ ನೇರವಾಗಿ ಫಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ) ಸಂದಾಯವಾಗಿರುವಂತಹ ಹಣವನ್ನು ಯಾವುದೇ ಕಾರಣಕ್ಕೆ ಸಾಲದ ಖಾತೆಗೆ ಜಮಾ ಮಾಡಬಾರದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಸರಕಾರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವು ಬ್ಯಾಂಕಿನಲ್ಲಿ ಸಾಲದ ಖಾತೆಗೆ ಜಮಾ ಆಗುತ್ತಿರುವ ಕುರಿತು ರೈತರಿಂದ ದೂರುಗಳ ಕಾರಣ ಧಾರವಾಡ ರೂಡ್ ಸೆಟ್ ಆವರಣದ ಸಭಾಂಗಣದಲ್ಲಿ (ಖUಆSಇಖಿI) ಆವರಣದಲ್ಲಿ ಆರ್.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ, ಜಿಲ್ಲಾ ಲೀಡ ಬ್ಯಾಂಕ ವ್ಯವಸ್ಥಾಪಕರ ಶ್ರೀ ಪ್ರಭುದೇವ ಎನ್ ಜಿ ಅವರ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರುಗಳ ಜೊತೆ ತುರ್ತು ಸಭೆಯನ್ನು ಜರುಗಿಸಿ, ಮಾತನಾಡಿದರು.
ಸರಕಾರದಿಂದ ಬಿಡುಗಡೆಯಾದ ಯಾವುದೇ ತರಹದ ಪೆÇ್ರೀತ್ಸಾಹ ಧನವನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡದೆ ಗ್ರಾಹಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೂ ಅವರ ಜೊತೆ ಸಂಯಮದಿಂದ ವರ್ತಿಸಬೇಕು. ತಾಂತ್ರಿಕ ಸಮಸ್ಯೆ ಇದ್ದರೆ ಗ್ರಾಹಕರಿಗೆ ಸರಿಯಾಗಿ ತಿಳುವಳಿಕೆ ನೀಡಿ ಮಾರ್ಗದರ್ಶನ ಮಾಡಬೇಕು ಮತ್ತು ಸಮಸ್ಯೆಯನ್ನು ಬೇಗನೆ ಪರಿಹರಿಸಬೇಕು ಎಂದು ಅವರು ಸಲಹೆ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಬ್ಯಾಂಕ್‍ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ ಯೋಜನೆಗಳ ಲಾಭವನ್ನು ತಲುಪಿಸುತ್ತಿವೆ. ಆದರೆ ಎಲ್ಲ ಬ್ಯಾಂಕ್ ಗಳು ಇದನ್ನು ಅನುಸರಿಸಬೇಕು. ಸರಿಯಾದ ಸಮಯಕ್ಕೆ ಉದ್ಯೋಗಿಗಳಿಗೆ ಸಾಲ, ಸಹಾಯಧನ ಸೌಲಭ್ಯ ದೊರೆಯಬೇಕು ಎಂದರು.
ರೈತರ ಸಹಮತ ವಿಲ್ಲದೆ ಬರಪರಿಹಾರ ಸೇರಿದಂತ ಯಾವ ಪೆÇ್ರೀತ್ಸಹಧನವನ್ನು ಸಾಲಕ್ಕೆ ಜಮೆ ಮಾಡಬಾರದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಎಲ್ಲ ಬ್ಯಾಂಕ್ ಶಾಖೆಗಳಿಗೆ ಮಾಹಿತಿ ನೀಡಿ, ರೈತರಿಗೆ ತೊಂದರೆ ಆಗದಂತೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಲೀಡ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಎನ್.ಜಿ. ಅವರು 2023-24 ಸಾಲಿನ ಪ್ರಗತಿಯನ್ನು ವಿವರಿಸುತ್ತಾ, ಜಿಲ್ಲೆಯ ಬ್ಯಾಂಕುಗಳಿಂದ 2,90,392 ಫಲಾನುಭವಿಗಳು ಕೃಷಿ ಸಾಲ ಪಡೆದಿದ್ದಾರೆ. ಗೊತ್ತುಪಡಿಸಿದ ಗುರಿಗೆ ಹೋಲಿಸಲಾಗಿ ಶೇ. 125 ಕೃಷಿ ಸಾಲ ಮತ್ತು ಶೇ.164 ಆಧ್ಯತಾ ವಲಯಕ್ಕೆ ಹೆಚ್ಚಿನ ಸಾಲವನ್ನು ವಿತರಿಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ವಾರ್ಷಿಕ ವಿತ್ತೀಯ ಯೋಜನೆ 2024-25ರ ಕುರಿತು ಮಾಹಿತಿ ನೀಡುತ್ತಾ ಆಧ್ಯತಾವಲಯಕ್ಕೆ 12,738.76 ಕೋಟಿ ರೂ.ಗಳ ಗುರಿ ನಿಗದಿಪಡಿಸಲಾಗಿದ್ದು ಮಾರ್ಚ್ 2024ರ ಸಾಧನೆಗೆ ಹೋಲಿಸಲಾಗಿ ಆಧ್ಯತಾ ವಲಯಕ್ಕೆ ಸುಮಾರು ಶೇ. 14 ರ?À್ಟು ಹೆಚ್ಚಿನ ಗುರಿ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
2024-25 ನೇ ಸಾಲಿನಲ್ಲಿ ಬೇಳೆ ಸಾಲ ವಲಯದಲ್ಲಿ 1,27,283 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 1,640.27 ಕೋಟಿ ರೂ.ಗಳ?À್ಟು ಗುರಿ ಹೊಂದಿದ್ದು, 2291.25 ಕೋಟಿ ರೂ.ಗಳ?À್ಟು ಸಾಧನೆ ಮಾಡಲಾಗಿದೆ. ಒಟ್ಟು 140 ರ?À್ಟು ಶೇಕಡಾವಾರು ಸಾಧನೆ ಆಗಿದೆ.
ಕೃಷಿ ಅವಧಿ ಸಾಲ ವಲಯದಲ್ಲಿ 1,63,109 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 1,741.76 ಕೋಟಿ ರೂ.ಗಳ?À್ಟು ಗುರಿ ಹೊಂದಿದ್ದು, 1,946.22 ಕೋಟಿ ರೂ.ಗಳ?À್ಟು ಸಾಧನೆ ಮಾಡಲಾಗಿದೆ. ಒಟ್ಟು 112 ಶೇಕಡಾವಾರು ಸಾಧನೆ ಆಗಿದೆ.
ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ವಲಯದಲ್ಲಿ 47,160 ಫಲಾನುಭವಿಗಳು ಇದ್ದು ಮಾರ್ಚ್ 2024 ರ ಅಂತ್ಯಕ್ಕೆ 3,021 ಕೋಟಿ ರೂ.ಗಳ?À್ಟು ಗುರಿ ಹೊಂದಿದ್ದು, 6,368.18 ಕೋಟಿ ರೂ.ಗಳ?À್ಟು ಸಾಧನೆ ಮಾಡಲಾಗಿದೆ. ಒಟ್ಟು 211 ಶೇಕಡಾವಾರು ಸಾಧನೆ ಆಗಿದೆ.