ಸಾಲಬಾಧೆ : ಆತ್ಮಹತ್ಯೆಗೆ ರೈತ ಶರಣು

ಗದಗ, ಏ. ೧೯- ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತರೋರ್ವರು ಜಮೀನಿನಲ್ಲಿಯೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಹಿರೇಕೊಪ್ಪ
ಗ್ರಾಮದಲ್ಲಿ ನಡೆದಿದೆ. ಮಹೇಶ್ ವಡ್ಡಿನ (೩೮) ಆತ್ಮಹತ್ಯೆ ಮಾಡಿಕೊಂಡ ರೈತರ ಎಂದು ಗುರುತಿಸಲಾಗಿದೆ. ಇವರಕುಟುಂಬದಲ್ಲಿ ೧ ಎಕರೆ ಜಮೀನಿತ್ತು. ಕಳೆದ ಎರಡು ವರ್ಷಗಳಿಂದ ಬೆಳೆ ನಷ್ಟವಾಗಿತ್ತು.
ಕೃಷಿ ಉದ್ದೇಶಕ್ಕಾಗಿ ಬ್ಯಾಂಕ್ ಹಾಗೂ ಖಾಸಗಿಯಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಆದರೆ ಇದನ್ನು ತೀರಿಸಲು ಸಾಧ್ಯವಾಗಿರಲಿಲ್ಲ. ಈ ನಡುವೆ ಸಾಲ ಮರು ಪಾವತಿ ಮಾಡುವಂತೆ
ಕನರ್?ಟಕ ವಿಕಾಸ ಗ್ರಾಮೀಣ ಬ್ಯಾಂಕ್’ನವರು ನೋಟೀಸ್ ಜಾರಿಗೊಳಿಸಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ
ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.