ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ

ವಿಜಯಪುರ, ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ನಡೆದಿದೆ.
ಸಿದ್ದಲಿಂಗಪ್ಪ ರೂಡಗಿ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.
ತನ್ನ ಜಮೀನಿನಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ ರೈತ ಸಿದ್ದಲಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿಂದಗಿ ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ವಿವಿಧಡೆ ಕೈಗಡವಾಗಿ ಲಕ್ಷಾಂತರ ರೂ.ಸಾಲ ಮಾಡಿದ್ದರು.
ಕೊರೊನಾ, ಅತಿಯಾದ ಮಳೆಯಿಂದ ಬೆಳೆ ನಾಶದಿಂದ ಮನ ನೊಂದುಕೊಂಡಿದ್ದ ರೈತ ಸಿದ್ದಲಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.