ಸಾಲ ಬಾಧೆ: ಬಾವಿಗೆ ಹಾರಿ ರೈತ ಮಹಿಳೆ ಆತ್ಮ ಹತ್ಯೆ

ವಿಜಯಪುರ, ಮೇ.13:ಸಾಲ ಬಾಧೆ ತಾಳದೆ ರೈತ ಮಹಿಳೆಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಂಭವಿಸಿದೆ.
ಅರ್ಜುಣಗಿ ಗ್ರಾಮದ ರುಕ್ಮವ್ವ ದುಂಡಪ್ಪ ಬಾಡಿಗಿ(52) ಎಂಬ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತಳು 10 ಲಕ್ಷ ಸಾಲ ಮಾಡಿ ಸಾಲ ತೀರಿಸಲಾಗದೆ ಧೃತಿಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದು. ಗದ್ಯಾಳ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ, ವಿಜಯಪುರ ಎಚ್.ಡಿ.ಎಫ್.ಸಿ ಬ್ಯಾಂಕಿನಲ್ಲಿ 2.5 ಲಕ್ಷ, ಬಬಲೇಶ್ವರದ ಚೈತನ್ಯ ಫೈನಾನ್ಸ್ ನಲ್ಲಿ 50 ಸಾವಿರ, ಕೈಗಡವಾಗಿ 6 ಲಕ್ಷ ಸಾಲ ಮಾಡಿಕೊಂಡಿದ್ದಳು.
ಮೃತಳಿಗೆ ಗಂಡ, ಇಬ್ಬರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗ ಹೊಂದಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.