ಸಾವಳಿ ಶಾಲೆಗೆ ಪ್ರಭು ಚವ್ಹಾಣ ಭೇಟಿ, ಪರಿಶೀಲನೆ

ಬೀದರ:ಮೇ.30:ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಮೇ.29ರಂದು ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಆರಂಭೋತ್ಸವ ಕುರಿತು ಮಾಡಿಕೊಳ್ಳಲಾಗುತ್ತಿರುವ ಸಿದ್ಧತೆಗಳ ಕುರಿತು ಶಾಲೆಯ ಮುಖ್ಯಗುರು ಇಬ್ರಾಹಿಂ ಅವರಿಂದ ವಿವರಣೆ ಪಡೆದರು. ಇದೇ ವೇಳೆ ಶಾಲೆಗೆ ಅಸಗಮಿಸಿದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಲಾಯಿತು.
Áಲಾ ಆವರಣವನ್ನು ಶುಚಿಯಾಗಿಡಬೇಕು. ಮಕ್ಕಳಿಗೆ ಶುದ್ಧ ಕುಡಿಯುವ ನೀರು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪುಸ್ತಕ, ಸಮವಸ್ತ್ರ ವಿತರಣೆ ಸಕಾಲಕ್ಕೆ ಆಗಬೇಕು. ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಸಬೇಕು ಎಂದು ಮುಖ್ಯಗುರುಗಳಿಗೆ ತಿಳಿಸಿದರು.
ಮಕ್ಕಳ ಹಾಜರಾತಿ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸುವಂತೆ ಪಾಲಕರಲ್ಲಿ ತಿಳುವಳಿಕೆ ಮೂಡಿಸಬೇಕು. ಹೆಚ್ಚಿನ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಪ್ರವೇಶ ಪಡೆಯುವಂತೆ ಆಗಬೇಕು. ಶಿಕ್ಷಕರು ಸಮಯ ಪಾಲನೆ ಮಾಡಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಮಕ್ಕಳ ಕಲಿಕೆಗೆ ಯಾವುದೇ ರೀತಿಯ ಸಮಸ್ಯೆಯಾಗದ ರೀತಿಯಲ್ಲಿ ಮುಖ್ಯಗುರುಗಳು ವ್ಯವಸ್ಥೆ ಮಾಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.
ಈ ಮುಖಂಡರಾದ ಬಸವರಾಜ ಪಾಟಿಲ, ವಿಜಯಕುಮಾರ ಮದನೂರೆ, ಶಿವಾಜಿರಾವ ಮುಂಗನಾಳ, ರಾಮಶೆಟ್ಟಿ ಪನ್ನಾಳೆ, ಅಶೋಕ ಮೇತ್ರೆ, ಅನೀಲ ಬಿರಾದಾರ, ಸಚಿನ ರಾಠೋಡ್, ಜೈಪಾಲ ರಾಠೋಡ್ ಸೇರಿದಂತೆ ಇತರರಿದ್ದರು.