ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆ

ಕಾಳಗಿ : ಜೈ ಕನ್ನಡಿಗರ ರಕ್ಷಣಾ ವೇದಿಕೆ ಕಾಳಗಿ ತಾಲೂಕ ಘಟಕದ ವತಿಯಿಂದ ಕೋರವಾರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ
ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ 192ನೇ ಜನ್ಮದಿನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಜಿಲ್ಲಾಪಂಚಾಯತ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರ ನೆರವೇರಿಸಿದರು. ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ಕ್ಷೇತ್ರ ಶಿಕ್ಷಣ ಅಧಿಕಾರಿ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜೈಕರವೇ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಸಚಿನ ಪರತಾಬಾದ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಶಿನಾಥ ಮಾಳಗಿ, ಜೈಕರೆ ತಾಲೂಕ ಅಧ್ಯಕ್ಷ ಪರಮೇಶ್ವರ, ಮಲ್ಲಿನಾಥ ಪಾಟೀಲ ಕಾಳಗಿ, ಅಶೋಕ ಮಿಸ್ಕಿನ್, ಬಸಚರಾಜ ಜಮಾದಾರ ಸೇರಿದಂತೆ ಹಲವರು ಇದ್ದರು.