ಸಾವಿತ್ರಿಬಾಯಿ ಪುಲೆ ಜಯಂತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ಜ, 5 ಆಧುನಿಕ ಭಾರತದ ಮೊದಲ ಮಹಿಳಾ ಶಿಕ್ಷಕಿ, ಮಹಿಳೆಯರ ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಅಕ್ಷರ ಮಾತೆ, ಸಾವಿತ್ರಿಬಾಯಿ ಪುಲೆಯವರ ಜಯಂತಿ  ಮತ್ತು  ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿಯ ಸದಸ್ಯರುಗಳು, ಹಾಗೂ  ತಾಲ್ಲೂಕು ಸಮಿತಿ ಸದಸ್ಯರುಗಳು, ಮುಖಂಡರ ಕಾರ್ಯಕಾರಿಣಿ ಸಭೆ ಇಂದು ನಗರದ ಕೋಟೆ ಪ್ರದೇಶದಲ್ಲಿರುವ ನೂತನ ಡಿ.ಎಸ್.ಎಸ್. ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ ಜಗದೀಶ್ವರರೆಡ್ಡಿ ವಹಿಸಿದ್ದರು.
ಮುಖಂಡ ಮುಂಡ್ರಿಗಿ ನಾಗರಾಜ್ ಅವರು ಮಾತನಾಡಿ, ಸಾವಿತ್ರಿಬಾಯಿ ಪುಲೆ ರವರ ಜೀವನ ಮತ್ತು ಹೋರಾಟದ ಬಗ್ಗೆ ಹೇಳಿದರು. ಜಿಲ್ಲೆಯ ಜಿಲ್ಲಾ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಮತ್ತು ತಾಲೂಕು ಸಮಿತಿ ಸದಸ್ಯರುಗಳು ಇದ್ದರು.‌