ಸಾವಿತ್ರಿಬಾಯಿ ಪುಲೆ ಮನುಕುಲಕ್ಕೆ ಮಾದರಿ: ಗಾದಗಿ

ಬೀದರ್:ಆ.1: ನಗರದ ಸಪ್ನಾ ಮಲ್ಟಿಫ್ಲೆಕ್ಸ್‍ನಲ್ಲಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಅಮೋಘ ಕ್ರಿಯೇಷನ್ ಹಾಗೂ ಬುದ್ಧ ಬೆಳಕು ಟ್ರಸ್ಟ್ ಆಶ್ರಯದಲ್ಲಿ ‘ಸಾವಿತ್ರಿಬಾಯಿ ಫುಲೆ’ ಚಲನಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಮಾತನಾಡಿ,’ ಸಾವಿತ್ರಿಬಾಯಿ ಫುಲೆ ಅವರು ಅನ್ಯಾಯ, ಅವಮಾನಗಳನ್ನು ಮೆಟ್ಟಿ ನಿಂತು ದಲಿತರಿಗೆ, ಶೋಷತರಿಗೆ ಹಿಂದುಳಿದ ವರ್ಗದವರಿಗೆ ಅಕ್ಷರ ಜ್ಞಾನವನ್ನು ನೀಡಿ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ’ ಎಂದರು.

ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸಂತಿಬಾಯಿ ಅಕ್ಕಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಕರ್ನಾಟಕ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಖ ಮೆಹಬೂಬ್ ಪಟೇಲ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ ಮಾತನಾಡಿದರು.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕ ಅಧ್ಯಕ್ಷೆ ಸಾರಿಕಾ ಗಂಗಾ ಅಧ್ಯಕ್ಷತೆ ವಹಿಸಿದ್ದರು.

ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕಿ ಗೀತಾ ಗಡ್ಡೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ ಮಾಲಿಪಾಟೀಲ, ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್, ಸಪ್ನಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ವ್ಯವಸ್ಥಾಪಕ ಹರಿಕೃಷ್ಣ ಹಾಗೂ ನಿರಂಕಾರ ಬಂಡಿ ಇದ್ದರು.

ಶರಣಮ್ಮ ನಾರಾಯಣಪೇಟಕರ್ ಸ್ವಾಗತಿಸಿದರು. ಭುವನೇಶ್ವರಿ ನಿರೂಪಿಸಿದರು. ಸುಜಾತಾ ಪೂಜಾರಿ ವಂದಿಸಿದರು.