ಸಾವಿತ್ರಿಬಾಯಿ ಪುಲೆ ವ್ಯಕ್ತಿತ್ವ ಎಲ್ಲರಿಗೂ ಪ್ರೇರಣೆಯಾಗಲಿ – ಶಾಸಕ

ರಾಯಚೂರು.ಜು.೩೧- ಸಾವಿತ್ರಿಬಾಯಿ ಪುಲೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದವರು. ಅಲ್ಲದೆ, ಮಹಿಳೆಯರಿಗೆ ವಿಶೇಷವಾಗಿ ಶಿಕ್ಷಣ ದೊರೆಯಬೇಕೆಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆಂದು ಶಾಸಕ ಡಾ.ಶಿವರಾಜ ಪಾಟೀಲ್ ಅವರು ಹೇಳಿದರು.
ಅವರಿಂದು ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ಸಾವಿತ್ರಿಬಾಯಿ ಪುಲೆ ಅವರ ಜೀವನ ಆಧಾರಿತ ಚಿತ್ರ ಉದ್ಘಾಟಿಸಿ ಮಾತನಾಡಿದರು. ಸಾವಿತ್ರಿಬಾಯಿ ಪುಲೆ ಅವರು ಎಲ್ಲಾ ಮಹಿಳೆಯರಿಗೆ ಮಾತ್ರವಲ್ಲ ಸಮಾಜದ ಎಲ್ಲರಿಗೂ ಆದರ್ಶಪ್ರಾಯ ಮಹಾನ್ ವ್ಯಕ್ತಿಯಾಗಿದ್ದಾರೆ. ಅಂಬೇಡ್ಕರ್ ಕಾಲದಿಂದಲೂ ಸಾವಿತ್ರಿಬಾಯಿ ಪುಲೆ ಅವರು ದಲಿತರು, ಮಹಿಳೆಯರು ಹಾಗೂ ಸಮಾಜದ ಕಟ್ಟಕಡೆಯ ಎಲ್ಲಾರಿಗೂ ಮಾದರಿಯಾಗಿದ್ದು, ಈ ಚಿತ್ರ ವೀಕ್ಷಣೆಯಿಂದ ಸಾವಿತ್ರಿಬಾಯಿಪುಲೆ ಅವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಪ್ರೇರಣೆಯಾಗಲಿ ಎಂದು ಹಾರೈಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಲಲಿತಾ ಕಡಗೋಳ ಆಂಜಿನೇಯ್ಯ, ರವೀಂದ್ರ ಜಲ್ದಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.