‘ಸಾವಿತ್ರಿ’ಯಾದ ತಾರಾ

ಕನ್ನಡ ಚಿತ್ರರಂಗದಲ್ಲಿ ಮೂರು ದಶಕಗಳಿಂದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ ಜನಮನಸೂರೆಗೊಂಡಿರುವ ನಟಿ ತಾರಾ.
ಈಗ ಅವರು ‘ ಸಾವಿತ್ರಿ ‘ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಈ ತಿಂಗಳ 19 ರಿಂದ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆಯಲಿದೆ.
ಪ್ರಶಾಂತ್ ಕುಮಾರ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಎಸ್ ದಿನೇಶ್ ನಿರ್ದೇಶನ‌ ಮಾಡುತ್ತಿದ್ದಾರಡ
ಹೃದಯ ಶಿವ ನಾಲ್ಕು ಹಾಡುಗಳಿರುವ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ.
ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ತಾರಾ, ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ ,‌ಬೇಬಿ ಲೈಲಾ, ಪ್ರಮೋದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೊಬೈಲ್ ಮುಂತಾದ ಆಧುನಿಕ ತಂತ್ರಜ್ಞಾನಗಳಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು? ಎನ್ನುವುದು ಚಿತ್ರದ ಕಥಾಹಂದರ.