ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ

ಸಿರುಗುಪ್ಪ ಜ 03 : ಮಹಿಳಾ ಶಿಕ್ಷಣದ ಕ್ಷೇತ್ರಕ್ಕೆ ಬಗೆಯ ಕಾಣಿಕೆಯನ್ನೂ ನೀಡಿ ದಮನಿತ ಸಮುದಾಯಗಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ಸ್ಥಾಪಿಸಿ, ಕ್ರಾಂತಿಕಾರಿ ಚಳುವಳಿ ಮಾಡಿದ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಮಾಡುವುದೇ ನಮ್ಮ ಪುಣ್ಯ ಎಂದು ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಗೌರವ ಅಧ್ಯಕ್ಷೆ ಶರಣಮ್ಮ ಹೇಳಿದರು.
ನಗರದ ಶ್ರೀಗುರುಭವನದಲ್ಲಿ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕದವತಿಯಿಂದ ಹಮ್ಮಿಕೊಂಡ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ದೀಪಾ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು ಅದರಂತೆ ಇಂದು ನಮ್ಮ ಮಹಿಳಾ ಶಿಕ್ಷಕರು ಆಗ ಬೇಕೆಂದು ತಿಳಿಸಿದರು.
ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ಎಂ.ಟಿ.ಶಾಂತ ಮಾತನಾಡಿ ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟದ ಸತಾರಜಿಲ್ಲೆಯ ನೈಗಾಂನ್‍ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು. ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು ಎಂದರು ಇದೆ ಸಂದರ್ಭದಲ್ಲಿ ಕೋಶಧ್ಯಕ್ಷೆ ಚಾಯದೇವಿ, ಉಪಾಧ್ಯಕ್ಷೆ ಯಂಕಮ್ಮ ಜೋಷಿ, ಶಿಕ್ಷಕಿಯರಾದ ಶರಣಮ್ಮ, ರಾಧ, ಕೆ.ವಿ.ನಾಗರತ್ನಮ್ಮ ಸೇರಿದಂತೆ ಸಂಘದ ಸದಸ್ಯರು ಇದ್ದರು.