ಸಾಸ್ವೆಹಳ್ಳಿ ಏತನೀರಾವರಿ ಯೋಜನೆಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು- ಜಿ.ಎಂ. ಸಿದ್ದೇಶ್ವರ

ದಾವಣಗೆರೆ ಏ. 23;ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪಂಪ್‌ಹೌಸ್‌ಗಳು, ಡೆಲವರಿ ಚೇಂಬರ್‌ಗಳು, ಎಲೆಕ್ಟ್ರಿಕಲ್ ಸಬ್‌ಸ್ಟೇಷನ್‌ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್‌ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನ ಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿ ಪೂರ್ಣಗೊಳಿಸಬೇಕು, ಇದರಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾಸ್ವೆಹಳ್ಳಿ ಸೇರಿದಂತೆ ವಿವಿಧ ಏತನೀರಾವರಿ ಯೋಜನೆಗಳ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯಡಿ ಜಾಕ್‌ವೆಲ್ ಕಮ್ ಪಂಪ್‌ಹೌಸ್, ಡೆಲಿವರಿ ಛೇಂಬರ್, ಎಲೆಕ್ಟಿçಕಲ್ ಸಬ್‌ಸ್ಟೇಷನ್, ರೈಸಿಂಗ್ ಮೈನ್‌ಗಳ ನಿರ್ಮಾಣಕ್ಕಾಗಿ ಹೊನ್ನಾಳಿ ತಾಲ್ಲೂಕಿನಲ್ಲಿ 6 ಎಕರೆ 03 ಗುಂಟೆ ಹಾಗೂ ಚನ್ನಗಿರಿ ತಾಲ್ಲೂಕಿನಲ್ಲಿ 09 ಎಕರೆ 14 ಗುಂಟೆ ಸೇರಿದಂತೆ 15 ಎಕರೆ 17 ಗುಂಟೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತದೆ. ಈಗಾಗಲೆ ಸಾಸ್ವೆಹಳ್ಳಿ ಗ್ರಾಮದಲ್ಲಿ 03 ಎಕರೆ 03 ಗುಂಟೆಗೆ ಸಂಬಂಧಿಸಿದಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50 ರಷ್ಟು ಪರಿಹಾರ ಹಣ ಪಾವತಿಸಲಾಗಿದೆ. ಅದೇ ರೀತಿ ಚನ್ನಗಿರಿ ತಾಲ್ಲೂಕು ಚಕ್ಕಲಿ ಗ್ರಾಮ ಬಳಿ ಪಂಪ್‌ಹೌಸ್, ಎಲೆಕ್ಟಿçಕಲ್ ಸಬ್‌ಸ್ಟೇಷನ್, ಅಪ್ರೋಚ್ ರಸ್ತೆಗೆ ಅಗತ್ಯವಿರುವ ಒಟ್ಟು 07 ಎಕರೆ ಭೂಮಿಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50 ರಷ್ಟು ಪರಿಹಾರ ಹಣ ಪಾವತಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮುತ್ತಗದೂರು ಬಲಿ ಪಂಪ್‌ಹೌಸ್ ಹಾಗೂ ವಿದ್ಯುತ್ ಸಬ್‌ಸ್ಟೇಷನ್, ಚಿತ್ರದುರ್ಗ ತಾಲ್ಲೂಕು ಮದಕರಿಉರ ಮತ್ತು ದೊಡ್ಡಿಗನಾಳ್ ಗ್ರಾಮ ಬಳಿ ಡೆಲವರಿ ಚೇಂಬರ್, ಅಪ್ರೋಚ್ ರಸ್ತೆಗಾಗಿ ಸದ್ಯ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ನಿಗಮಕ್ಕೆ ಹಸ್ತಾಂತರ ಮಾಡುವ ಕಾರ್ಯ ಬಾಕಿ ಇದೆ. ಭೂಸ್ವಾಧೀನ ಕಾರ್ಯವನ್ನು ವಿಳಂಬಕ್ಕೆ ಅವಕಾಶವಿಲ್ಲದಂತೆ ಶೀಘ್ರ ಪೂರ್ಣಗೊಳಿಸಬೇಕು. ಯಾವುದೇ ಅಡೆತಡೆಗಳು ಇದ್ದಲ್ಲಿ ಕೂಡಲೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಂಸದರು ಸೂಚನೆ ನೀಡಿದರು.  ಹೊನ್ನಾಳಿ ತಾಲ್ಲೂಕಿನಲ್ಲಿ ಪಂಪ್‌ಹೌಸ್-1 ರ ಬಳಿ ನಿರ್ಮಿಸಲು ಉದ್ದೇಶಿಸಿರುವ ಎಲೆಕ್ಟಿçಕಲ್ ಸಬ್‌ಸ್ಟೇಷನ್‌ಗೆ ವಿದ್ಯುತ್ ಸಂಪರ್ಕಕ್ಕಾಗಿ ದಿಡಗೂರು, ಬೀರಗೊಂಡನಹಳ್ಳಿ, ಚಿಕ್ಕಬಾಸೂರು, ಉಜ್ಜನೀಪುರ, ಹೊಟ್ಯಾಪುರ, ಸದಾಶಿವಪುರ, ಸಾಸ್ವೆಹಳ್ಳಿ, ಮಾವಿನಕೋಟೆ ಗ್ರಾಮ ವ್ಯಾಪ್ತಿಯಲ್ಲಿ ಒಟ್ಟು 49 ವಿದ್ಯುತ್ ಟವರ್‌ಗಳನ್ನು ನಿರ್ಮಿಸಬೇಕಿದ್ದು, 48 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಇದಕ್ಕಾಗಿ ಅಗತ್ಯ ಜಾಗ ಮತ್ತು ಕಾರಿಡಾರ್ ಹಾದುಹೋಗುವ ಮಾರ್ಗದ ಸರ್ವೆ ನಕ್ಷೆ ಹಾಗೂ ಬಾಧಿತರಾಗುವ ರೈತರ ಭೂಮಿಯ ಸರ್ವೆ ನಂಬರ್‌ಗಳೊAದಿಗೆ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಪರಿಹಾರಮೊತ್ತ ನಿಗದಿಪಡಿಸುವುದು ಬಾಕಿ ಇದೆ. ಹೊಳಲ್ಕೆರೆ ತಾಲ್ಲೂಕು ಸಾಸಲು ಗ್ರಾಮ ಬಳಿಯ ಸಬ್‌ಸ್ಟೇಷನ್‌ಗೆ 20 ಟವರ್‌ಗಳ ನಿರ್ಮಾಣಕ್ಕೆ ಸರ್ವೆ ಪೂರ್ಣಗೊಂಡಿದೆ. ಅದೇ ರೀತಿ ಕೆರೆಬಿಳಚಿ ಗ್ರಾಮ ಬಳಿ ವಿದ್ಯುತ್ ಸಬ್‌ಸ್ಟೇಷನ್‌ಗೆ ವಿದ್ಯುತ್ ಸಂಪರ್ಕಿಸಲು 4.50 ಕಿ.ಮೀ. ಮಾರ್ಗದಲ್ಲಿ 20 ವಿದ್ಯುತ್ ಟವರ್ ನಿರ್ಮಾಣಕ್ಕೆ ಜಕ್ಕಲಿ, ಸೋಮಲಾಪುರ, ಕೆರೆಬಿಳಚಿ ಗ್ರಾಮಗಳ ಸರ್ವೆ ಕಾರ್ಯವನ್ನು ಚನ್ನಗಿರಿ ತಹಸಿಲ್ದಾರರು ತ್ವರಿತವಾಗಿ ಮಾಡಿಸಬೇಕು, ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಬಾಕಿ ಇರುವ ಸರ್ವೆ ಕಾರ್ಯವನ್ನು ಆಯಾ ತಹಸಿಲ್ದಾರರು ಪೂರ್ಣಗೊಳಿಸಬೇಕು. ಪರಿಹಾರ ಮೊತ್ತದ ದರವನ್ನು ಒಂದು ವಾರದೊಳಗೆ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಸಂಸದರು ಮಾತನಾಡಿ, ಅಧಿಕಾರಿಗಳು ಸರ್ವೆ ಕಾರ್ಯ, ಭೂಸ್ವಾಧೀನದಂತಹ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಫಾಲೋಅಪ್ ಮಾಡುವುದಿಲ್ಲ, ಹೀಗಾಗಿ ಯೋಜನೆಗಳಲ್ಲಿ ಪ್ರಗತಿಯಾಗುವುದಿಲ್ಲ. ಅಧಿಕಾರಿಗಳ ಇಂತಹ ಕಾರ್ಯವೈಖರಿಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ. ಲಿಂಗಣ್ಣ, ಕರ್ನಾಟಕ ನೀರಾವರಿ ನಿಗಮ ತುಂಗಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಯತೀಶ್‌ಚಂದ್ರ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸೇರಿದಂತೆ ಬೆಸ್ಕಾಂ, ಕೆಪಿಟಿಸಿಎಲ್, ಲೋಕೋಪಯೋಗಿ ಇಲಾಖೆಗಳ ಇಂಜಿನಿಯರ್‌ಗಳು, ತಹಶೀಲ್ದಾರರು ಉಪಸ್ಥಿತರಿದ್ದರು.