
(ಸಂಜೆವಾಣಿ ವಾರ್ತೆ)
ಬಳ್ಳಾರಿ ಮೇ 06 : ಕನ್ನಡ ಅಸ್ಮಿತೆಯನ್ನು ಕಾಪಾಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪಾತ್ರ ಮಹತ್ವಧದು ಎಂದು ಡಾ. ವಿಕ್ರಂ ಹಿರೇಮಠ್ ನುಡಿದರು.
ಅವರು ನಿನ್ನೆ ಪರಿಷತ್ತಿನ ಜಿಲ್ಲಾ ಘಟಕದಿಂದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಭಾಷೆ ಉಳಿದರೆ ಕನ್ನಡಿಗ ಕರ್ನಾಟಕ ಉಳಿಯಲು ಸಾಧ್ಯ ಎಂದರು.
ನಿವೃತ್ತ ಉಪನ್ಯಾಸಕ ಎನ್ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿ, ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕಾಯಕದಲ್ಲಿ ಪರಿಷತ್ತು ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದೆಂದರು.
ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಲಕ್ಷ್ಮಿ ಕಿರಣ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಸುದೀರ್ಘ 109 ವರ್ಷಗಳ ಕಾಲ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಸಾರದ ದೆಸೆಯಲ್ಲಿ ವಿಶಿಷ್ಟವಾದ ಕಾರ್ಯಗಳನ್ನು ನಿರ್ವಹಿಸುತ್ತಿದೆಂದರು.
ಕಸಾಪ ಮಾಜಿ ಜಿಲ್ಲಾ ಕಾರ್ಯದರ್ಶಿ ಸಿ.ಎಂ ಗಂಗಾಧರಯ್ಯ ಮಾತನಾಡಿ, ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪರಿಷತ್ತು ಶ್ರಮಿಸುತ್ತಿದೆಂದರು.
ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಬಿ.ಜಿ ಮಂಜುನಾಥ್ ನಿವೃತ್ತ ಮುಖ್ಯ ಗುರುಗಳು, ಕಸಾಪ ರಾಜ್ಯ ಸಂಘಟನಾ ಕಾರ್ಯದರ್ಶಿ ಯೋಗ ನಾಗರಾಜ್, ಪೆಂಡಕೂರು ರಘುರಾಮ ಮೊದಲಾದವರನ್ನು ಸನ್ಮಾನಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಜಡೇಶ್ ಎಮ್ಮಿಗನೂರು ಗೀತ ಗಾಯನ ನಡೆಸಿಕೊಟ್ಟರು. ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹೆಚ್ ಹಂಪನಗೌಡ, ಸಂಘಟನಾ ಕಾರ್ಯದರ್ಶಿ ಬಸವರಾಜ ಬಿಸಲಹಳ್ಳಿ ಉಪಸ್ಥಿತರಿದ್ದರು.
ಯುವಕವಿ ಅಜಯ ಬಣಕಾರ ಅಧ್ಯಕ್ಷತೆಯಲ್ಲಿ ಇಪ್ಪತ್ತಕ್ಕೂ ಅಧಿಕ ಜನ ಕವಿಗಳು ಹುಣ್ಣಿಮೆ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಸಂಧ್ಯಾ ದೀಪ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿಗಳಾದ ಶಿವಲಿಂಗಪ್ಪ ಹಂದಿಹಾಳು ಸ್ವಾಗತ ಮತ್ತು ಪ್ರಸ್ತಾವಿಕ ನುಡಿಗಳನ್ನಾಡಿದರು.