ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಪ್ರಾರ್ಥನೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜ.02: ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ತಿಂಗಳು ಹಾವೇರಿಯಲ್ಲಿ ನಡೆಯುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಲಿ ಎಂದು ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರವಿಚೇಳ್ಳಗುರ್ಕಿಯವರು ಕನ್ನಡ ಭುವನೇಶ್ವರಿಗೆ ಪೂಜೆ ಸಲ್ಲಿಸಿ,ದೇವಿಯಲ್ಲಿ ಪ್ರಾರ್ಥಿಸಿದರು.
ಕನ್ನಡ ನಾಡು, ನುಡಿ, ನೆಲ,ಜಲ,ಗಡಿ ಕುರಿತು ಅರಿವು ಮೂಡಿಸಲು, ಉಳಿಸಿ, ಬೆಳಸಲು ಹುಟ್ಟಿಕೊಂಡ ಸಂಸ್ಥೆಯೇ ಸಾಹಿತ್ಯ ಪರಿಷತ್ ಎಂದು ಹೇಳಿದರು.
ಪರಿಷತ್ತು 1915 ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೂ ಕನ್ನಡಿಗರ ಹೃದಯದಲ್ಲಿ ಉಳಿಯುವ ಕೆಲಸ ಮಾಡುತ್ತಾ ಬರುತ್ತಿದೆ ಎಂದರು.
ಸಾಹಿತ್ಯ ಪರಿಷತ್ತಿನ ಸದಸ್ಯರುಗಳಾದ ಹಲಕುಂದಿ ಕ್ಲಸ್ಟರ್ ಸಿ.ಆರ್. ಪಿ ಗಳಾದ ಶ್ರೀನಿವಾಸ,ಎಸ್. ಡಿ.ಎಂ.ಸಿ.ಅಧ್ಯಕ್ಷ ದೊಡ್ಡ ಕುಮಾರ, ಶಿಕ್ಷಕರಾದ ಮುನಾವರ ಸುಲ್ತಾನ, ವಿ.ಬಸವರಾಜ, ದಿಲ್ಷಾದ್ ಬೇಗಂ, ಮೋದಿನ್ ಸಾಬ್, ಚನ್ನಮ್ಮ, ಸುಮತಿ, ಸುಧಾ,ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ, ರಾಮಾಂಜಿನೇಯ ಮುಂತಾದವರು ಉಪಸ್ಥಿತರಿದ್ದರು.